ADVERTISEMENT

ಬೀದರ್: ಗೌರಶೆಟ್ಟಿ ಕಾಲೇಜಿಗೆ ಓಲೇಕಾರ್ ಭೇಟಿ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 12:39 IST
Last Updated 1 ಅಕ್ಟೋಬರ್ 2021, 12:39 IST
ಲೋಕಾಯುಕ್ತ ಡಿವೈಎಸ್‍ಪಿ ಎನ್.ಎಂ. ಓಲೇಕಾರ್ ಅವರು ಬೀದರ್‌ನ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಕೋವಿಡ್ ಮಾರ್ಗಸೂಚಿ ಪಾಲನೆ ಪರಿಶೀಲಿಸಿದರು
ಲೋಕಾಯುಕ್ತ ಡಿವೈಎಸ್‍ಪಿ ಎನ್.ಎಂ. ಓಲೇಕಾರ್ ಅವರು ಬೀದರ್‌ನ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಕೋವಿಡ್ ಮಾರ್ಗಸೂಚಿ ಪಾಲನೆ ಪರಿಶೀಲಿಸಿದರು   

ಬೀದರ್: ಲೋಕಾಯುಕ್ತ ಡಿವೈಎಸ್‍ಪಿ ಎನ್.ಎಂ. ಓಲೇಕಾರ್ ಅವರು ಇಲ್ಲಿಯ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿದರು.

ಕೋವಿಡ್ ಮಾರ್ಗಸೂಚಿ ಅನ್ವಯ ಸ್ವಚ್ಛತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಬೋಧಕ-ಬೋಧಕೇತರ ಸಿಬ್ಬಂದಿ ಕೋವಿಡ್ ಲಸಿಕೆಯ ಎರಡೂ ಡೋಸ್‍ಗಳನ್ನು ತೆಗೆದುಕೊಂಡಿದ್ದಾರೆಯೇ ಎನ್ನುವುದನ್ನು ಪರಿಶೀಲಿಸಿದರು.

ವರ್ಗ ಕೋಣೆಗಳಿಗೆ ಭೇಟಿ ಕೊಟ್ಟು ವಿದ್ಯಾರ್ಥಿಗಳು ಮಾಸ್ಕ್ ಧರಿಸಿದ್ದು ಹಾಗೂ ಅಲ್ಲಲ್ಲಿ ಸೂಚನಾ ಫಲಕ ಅಳವಡಿಸಿದ್ದನ್ನು ಕಂಡು ಸಂತಸ ವ್ಯಕ್ತಪಡಿಸಿದರು.

ADVERTISEMENT

ಕಾಲೇಜು ಪ್ರಾಚಾರ್ಯ ಡಾ. ಚಂದ್ರಪ್ಪ ಭತಮುರ್ಗೆ, ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ, ಮಾಣಿಕರಾವ್ ಪಾಂಚಾಳ ಅವರಿಂದ ವಿದ್ಯಾರ್ಥಿಗಳ ಒಟ್ಟು ಸಂಖ್ಯೆ ಹಾಗೂ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆಯ ಮಾಹಿತಿ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.