ADVERTISEMENT

ಬೀದರ್ | ತಂಪರೆದ ಮಳೆ; ನೆಮ್ಮದಿಯ ನಿಟ್ಟುಸಿರು

​ಪ್ರಜಾವಾಣಿ ವಾರ್ತೆ
Published 3 ಜೂನ್ 2024, 9:08 IST
Last Updated 3 ಜೂನ್ 2024, 9:08 IST
   

ಬೀದರ್: ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗಿನ ಜಾವದ ವರೆಗೆ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

ಕಳೆದ ಕೆಲವು ದಿನಗಳಿಂದ ವಿಪರೀತ ಸೆಕೆ ಇತ್ತು. ಭಾನುವಾರ ಸುರಿದ ಮಳೆಗೆ ಇಳೆ ತಂಪಾಗಿದ್ದು, ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಭಾನುವಾರ ಸಂಜೆ ಆರಂಭಗೊಂಡ ತುಂತುರು ಮಳೆ ತಡರಾತ್ರಿ ವರೆಗೆ ಮುಂದುವರೆಯಿತು. ನಸುಕಿನ ಜಾವ ಧಾರಾಕಾರ ಮಳೆ ಬೆಳಿಗ್ಗೆ ಎಂಟು ಗಂಟೆಯ ತನಕ ಸುರಿಯಿತು. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ದೈನಂದಿನ ಕೆಲಸಗಳಿಗೆ ಹೋಗುವವರು ಪರದಾಟ ನಡೆಸಿದರು.

ADVERTISEMENT

ಜಿಲ್ಲೆಯಲ್ಲಿ 1.8 ಸೆಂ.ಮೀ ಮಳೆಯಾಗಿದೆ. ಕಮಲನಗರ ಹೋಬಳಿಯಲ್ಲಿ ಅತಿ ಹೆಚ್ಚು 4.1 ಸೆಂ. ಮೀ ವರ್ಷಧಾರೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.