ಬೀದರ್: ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಅವರ ಭಾಲ್ಕಿಯ ಮನೆಯಲ್ಲಿ ಬುಧವಾರ ಮಣ್ಣಿನ ಗಣೇಶ ಪ್ರತಿಷ್ಠಾಪನೆ ಮಾಡಿ ಪೂಜೆ ಸಲ್ಲಿಸಿದರು.
ಪತ್ನಿ ಗೀತಾ ಖಂಡ್ರೆಯವರೊಂದಿಗೆ ಗಣೇಶನಿಗೆ ಪೂಜೆ ಸಲ್ಲಿಸಿ,ಆರತಿ ಬೆಳಗಿದರು.
ಪರಿಸರ ಸ್ನೇಹಿ ಮಣ್ಣಿನ ಗಣೇಶನ ಪ್ರತಿಷ್ಠಾಪನೆಯ ಮೂಲಕ ಪರಿಸರ ಸಂರಕ್ಷಣೆಯ ಅಗತ್ಯತೆಯನ್ನು ಪುನರುಚ್ಚರಿಸಿದ ಅವರು, ಹಬ್ಬದ ಆಚರಣೆಗಳು ಪ್ರಕೃತಿಯೊಂದಿಗೆ ಹೊಂದಿಕೊಳ್ಳುವಂತೆ ಸಮಾಜದ ಎಲ್ಲರೂ ಸಂಕಲ್ಪ ಮಾಡಬೇಕೆಂದು ಮನವಿ ಮಾಡಿದರು.
ವಿಘ್ನ ನಿವಾರಕ ಸಮಸ್ತ ನಾಡಿನ ಜನತೆಗೆ ಒಳಿತು ಮಾಡಲೆಂದು ಪ್ರಾರ್ಥಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.