ಬೀದರ್: ಇಲ್ಲಿನ ಪ್ರತಾಪನಗರದ ಜನಸೇವಾ ಶಿಶು ಮಂದಿರ, ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶುಕ್ರವಾರ ಶೈಕ್ಷಣಿಕ ಮಾರ್ಗದರ್ಶನ ಜರುಗಿತು.
ಕೋಲಾರದ ಸಂಪನ್ಮೂಲ ವ್ಯಕ್ತಿ ಮಂಜುಳಾ ಭೀಮರಾವ್ ಮಾತನಾಡಿ,‘ಸೃಜನಾತ್ಮಕ ಬೋಧನೆ ಹಾಗೂ ಚಟುವಟಿಕೆಗಳಿಂದ ಮಕ್ಕಳ ಜ್ಞಾನ ವೃದ್ಧಿಯಾಗುತ್ತದೆ. ಚಟುವಟಿಕೆಗಳು ಹೊಸ ವಿಷಯದ ಸುಲಭ ಕಲಿಕೆಗೆ ನೆರವಾಗುತ್ತವೆ. ಮಕ್ಕಳಲ್ಲಿ ಸೃಜನಶೀಲತೆಯನ್ನೂ ಹೆಚ್ಚಿಸುತ್ತವೆ’ ಎಂದು ಹೇಳಿದರು.
‘ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ. ಛಲದೊಂದಿಗೆ ಪರಿಶ್ರಮ ವಹಿಸಿದರೆ ಎಲ್ಲವೂ ಸಾಧ್ಯವಾಗಲಿದೆ. ಮಕ್ಕಳು ಜೀವನದಲ್ಲಿ ದೊಡ್ಡ ಕನಸು ಕಾಣಬೇಕು. ಅದನ್ನು ಸಾಕಾರಗೊಳಿಸಲು ನಿರಂತರ ಪ್ರಯತ್ನಿಸಬೇಕು’ ಎಂದರು.
ಜನಸೇವಾ ಶಾಲೆಯ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ, ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.