ADVERTISEMENT

ಬೀದರ್: ಮೊಟ್ಟೆ ಸೇವಿಸಿ ಮಕ್ಕಳು ಸಂಭ್ರಮ

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮೊಟ್ಟೆ ವಿತರಣೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2021, 20:49 IST
Last Updated 1 ಡಿಸೆಂಬರ್ 2021, 20:49 IST
ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಏಣಕೂರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಮಕ್ಕಳು ಮೊಟ್ಟೆ ಸೇವಿಸಿದರು
ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಏಣಕೂರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಮಕ್ಕಳು ಮೊಟ್ಟೆ ಸೇವಿಸಿದರು   

ಬೀದರ್: ಜಿಲ್ಲೆಯ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಬುಧವಾರ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸಲಾಯಿತು. ಮಕ್ಕಳ ಇಚ್ಛೆಗೆ ಅನುಸಾರವಾಗಿ ಮೊಟ್ಟೆಗಳನ್ನು ಕೊಡಲಾಯಿತು.

‘ಉರ್ದು ಹಾಗೂ ಮರಾಠಿ ಶಾಲೆಗಳಲ್ಲಿ ಎಲ್ಲ ಮಕ್ಕಳೂ ಮೊಟ್ಟೆ ಸ್ವೀಕರಿಸಿದ್ದಾರೆ. ಕನ್ನಡ ಶಾಲೆಗಳಲ್ಲಿ ಮಾತ್ರ ಕೆಲವರು ಮೊಟ್ಟೆ ಹಾಗೂ ಇನ್ನು ಕೆಲವರು ಬಾಳೆಹಣ್ಣು ಸೇವಿಸಿದರು. ಪಾಲಕರಿಂದಲೂ ಯಾವುದೇ ವಿರೋಧ ವ್ಯಕ್ತವಾಗಿಲ್ಲ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಣ್ಣ ಸ್ವಾಮಿ ತಿಳಿಸಿದರು.

ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಮಕ್ಕಳಲ್ಲಿ ಅಪೌಷ್ಟಿಕತೆ ಕಡಿಮೆ ಮಾಡಲು ಸರ್ಕಾರ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು, ಮೂರು ಬಾರಿ ಮೊಟ್ಟೆ ಹಾಗೂ ಬಾಳೆ ಹಣ್ಣು ವಿತರಿಸಲು ಆದೇಶ ಹೊರಡಿಸಿದೆ. ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 85,261 ಹಾಗೂ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ 39,476 ಮಕ್ಕಳು ಇದ್ದಾರೆ.

ADVERTISEMENT

ಪೌಷ್ಟಿಕ ಆಹಾರ ವಿತರಣೆ ಬೆಂಬಲಿಸಿ ಧರಣಿ: ಕಲ್ಯಾಣ ಕರ್ನಾಟಕದ ಪ್ರಾಥಮಿಕ ಶಾಲೆ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ ಸಮರ್ಥಿಸಿ ಭಾರತೀಯ ವಿದ್ಯಾರ್ಥಿ ಸಂಘ, ದಲಿತ ವಿದ್ಯಾರ್ಥಿ ಪರಿಷತ್, ಗೊಂಡ ವಿದ್ಯಾರ್ಥಿ ಸಂಘ ಸೇರಿದಂತೆ 10 ಸಂಘಟನೆಗಳ ಕಾರ್ಯಕರ್ತರು ಬೀದರ್‌ನಲ್ಲಿ ಸಾಂಕೇತಿಕ ಧರಣಿ ನಡೆಸಿದರು.

ಮೊಟ್ಟೆ ವಿತರಣೆ ಸ್ಥಗಿತಗೊಳಿಸುವುದಾದರೆ ಸೈನಿಕ ಶಾಲೆ, ಸೇನೆಯಲ್ಲೂ ಮಾಂಸಾಹಾರಕ್ಕೆ ಅವಕಾಶ ಕೊಡಬಾರದು. ಮೊಟ್ಟೆ ವಿತರಣೆ ವಿಷಯದಲ್ಲಿ ರಾಜಕೀಯ ಬೇಡ. ಸರ್ಕಾರದ ನಿರ್ಧಾರಕ್ಕೆ ಪೂರ್ಣ ಬೆಂಬಲವಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.