
ಹುಮನಾಬಾದ್: ‘ತಾಲ್ಲೂಕಿನ ಟಿಎಪಿಸಿಎಂಎಸ್ ಅಭಿವೃದ್ಧಿಯೊಂದಿಗೆ ಮುಂದಿನ ದಿನಗಳಲ್ಲಿ ರೈತರ ಹಾಗೂ ವ್ಯಾಪಾರಸ್ಥರ ಅಭಿವೃದ್ಧಿಗೆ ಪೂರಕವಾಗಿ ಶ್ರಮ ವಹಿಸಲಾಗುವುದು’ ಎಂದು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ್ ಪಾಟೀಲ ಹೇಳಿದರು.
ತಾಲ್ಲೂಕಿನ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಭಾನುವಾರ ಪಟ್ಟಣದಲ್ಲಿ ಮಾಜಿ ಸಚಿವ ರಾಜಶೇಖರ ಪಾಟೀಲ್ ಗೃಹ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
‘ತಮ್ಮ ನೇತ್ರತ್ವದ ಕಾಂಗ್ರೆಸ್ ಬೆಂಬಲಿತ ಪೆನಲ್ ಅವಿರೋಧವಾಗಿ ಆಯ್ಕೆಯಾಗಿದ್ದು ಸಂತೋಷ ತಂದಿದೆ. ಇನ್ನೂ ದಹೆಚ್ಚಿನ ಕೆಲಸದ ಜವಾಬ್ದಾರಿ ಹೆಚ್ಚಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇದ್ದು, ಸಚಿವರಾದ ಈಶ್ವರ ಖಂಡ್ರೆ, ರಹಿಂಖಾನ್, ಮಾಜಿ ಸಚಿವ ರಾಜಶೇಖರ ಪಾಟೀಲ್ ಹಾಗೂ ವಿಧಾನ ಪರಿಷತ್ ಸದ್ಯ ಡಾ.ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲ್ ಅವರ ಮೇಲೆ ಒತ್ತಡ ಹಾಕುವ ಮೂಲಕ ಸರ್ಕಾರದಿಂದ ಅನುದಾನ ತಂದು ಟಿಎಪಿಸಿಎಂಎಸ್‌ನ ನೂತನ ಕಚೇರಿ ಹಾಗೂ ಮಳಿಗೆಗಳನ್ನು ನಿರ್ಮಾಣ ಮಾಡಲಾಗುವುದು’ ಎಂದು ಭರವಸೆ ನೀಡಿದರು.
ಆರಂಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ನೂತನ ನಿರ್ದೇಶಕರನ್ನು ಅದ್ದೂರಿಯಾಗಿ ಸನ್ಮಾನಿಸಿ, ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಮಲ್ಲಿಕಾರ್ಜುನ್ ಮಾಳಶಟ್ಟಿ, ಅಫ್ಸರಮಿಯ, ಓಂಕಾರ ತುಂಬಾ, ಉಮೇಶ ಜಮಗಿ ಸೇರಿದಂತೆ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.