ಬೀದರ್: ಚುನಾವಣೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿರುವುದಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗೌತಮ್ ಅರಳಿ ಅವರಿಗೆ ರಾಜ್ಯಮಟ್ಟದ ಮಾಸ್ಟರ್ ತರಬೇತುದಾರ ಪ್ರಶಸ್ತಿ ಸಂದಿದೆ.
ಬೆಂಗಳೂರಿನಲ್ಲಿ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಇತ್ತೀಚೆಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ ಗೆಹಲೋತ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ ಹಾಜರಿದ್ದರು.
ಅರಳಿ ಅವರು ಕಳೆದ 20 ವರ್ಷಗಳಲ್ಲಿ ನಡೆದ ಎಲ್ಲ ಚುನಾವಣೆಗಳಲ್ಲಿ ತರಬೇತುದಾರರಾಗಿ ಉತ್ತಮ ಕೆಲಸ ನಿರ್ವಹಿಸಿದ ಹಿನ್ನೆಲೆಯಲ್ಲಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.