
ಔರಾದ್: ಬೀದರ್ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಅವರು ಶನಿವಾರ ತಾಲ್ಲೂಕಿನ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು.
ಬೆಳಕುಣಿ(ಚೌ), ಹೆಡಗಾಪುರ, ಸಂತತಪುರ, ಶೆಂಬೆಳ್ಳಿ, ಲಾಧಾ, ಧೂಪತಮಹಾಗಾಂವ ಕೌಠಾ(ಬಿ) ಗ್ರಾಮಗಳಿಗೆ ಭೇಟಿ ನೀಡಿ ಮತಯಾಚಿಸಿದರು.
‘ನಾನು ಪ್ರಾಮಾಣಿಕವಾಗಿ ಜಿಲ್ಲೆಯ ಅಭಿವೃದ್ಧಿ ಮಾಡುವೆ. ಮತದಾರರು ನನ್ನ ಮೇಲೆ ವಿಶ್ವಾಸ ಇಟ್ಟು ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕು. ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರು ಕಳೆದ ಹತ್ತು ವರ್ಷಗಳಲ್ಲಿ ಏನು ಕೆಲಸ ಮಾಡಿದ್ದಾರೆ ಎಂಬುದು ತಮಗೆಲ್ಲರಿಗೂ ಗೊತ್ತಿದೆ. ಅವರ ನಡೆವಳಿಕೆ ಸ್ವ–ಪಕ್ಷದವರಿಗೆ ಹಿಡಿಸುತ್ತಿಲ್ಲ. ಹೀಗಾಗಿ ಈ ಬಾರಿ ಅವರು ಪಾಠ ಕಲಿಯುವುದು ಗ್ಯಾರಂಟಿಯಾಗಿದೆ. ಕಾಂಗ್ರೆಸ್ ಪಕ್ಷದ ಬಗ್ಗೆ ಮತದಾರರಲ್ಲಿ ವಿಶ್ವಾಸವಿದೆ. ಎಲ್ಲ ಗ್ಯಾರಂಟಿ ಯೋಜನೆಗಳ ಲಾಭವನ್ನು ರಾಜ್ಯದ ಜನ ಪಡೆದಿದ್ದಾರೆ. ಹೀಗಾಗಿ ಜನರು ನಮ್ಮ ಕೈ ಬಿಡುವುದಿಲ್ಲ ಎಂಬ ನಂಬಿಕೆಯಿದೆ ಎಂದು ಹೇಳಿದರು.
‘ಜಿಲ್ಲೆಯ ಯುವಕರಿಗೆ ಉದ್ಯೋಗ ಕೊಡಿಸಲು ನಾನು ಪ್ರಯತ್ನ ಮಾಡುತ್ತೇನೆ. ಐಟಿ ಕಂಪನಿ ತರುವ ಉದ್ದೇಶವಿದೆ. ರೈತರ ಸಮಸ್ಯೆ ಪರಿಹರಿಸಲು ಸದಾ ಶ್ರಮಿಸುತ್ತೇನೆ’ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬರ್ಗೆ, ಮುಖಂಡ ಭೀಮಸೇನರಾವ ಸಿಂಧೆ, ಸುಧಾಕರ ಕೊಳ್ಳೂರ, ಗಂಗಾಧರ ಮಜಿಗೆ, ಮಲ್ಲಿಕಾರ್ಜುನ ಪಾಟೀಲ, ಸಾಯಿಕುಮಾರ ಘೋಡ್ಕೆ, ದತ್ತಾತ್ರಿ ಬಾಪುರೆ, ಹಣಮಂತರಾವ ಚವಾಣ, ಎಂ.ಡಿ ನಯೂಮ, ದೇವಿದಾಸ, ಮಹೇಶ, ರವಿ ಮಾಳಗೆ, ಪಾಂಡುರಡ್ಡಿ, ಸೈಯದ್ ಶರ್ಫೋದ್ದಿನ್, ಧೋಂಡಿಬಾ, ಶೇಷರಾವ, ಭೀಮರಾವ ಶೆಟಕಾರ ಹಾಜರಿದ್ದರು.
ಅಭ್ಯರ್ಥಿ ಸಾಗರ ಖಂಡ್ರೆ ಅವರನ್ನು ಬೆಂಬಲಿಸಿ ಬೆಳಕುಣಿ (ಚೌ) ಗ್ರಾಮದ ಯುವಕರು ಕಾಂಗ್ರೆಸ್ ಪಕ್ಷವನ್ನು ಸೇರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.