ADVERTISEMENT

ಚುನಾವಣೆ: ನಿರ್ಣಯ ಸದಸ್ಯರ ವಿವೇಚನೆಗೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 15:44 IST
Last Updated 7 ಡಿಸೆಂಬರ್ 2021, 15:44 IST
ಬೀದರ್ ತಾಲ್ಲೂಕಿನ ಕಾಶೆಂಪೂರ(ಪಿ)ದ ತಮ್ಮ ನಿವಾಸದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ ಅವರು ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಅವರನ್ನು ಸನ್ಮಾನಿಸಿದರು. ಕೇಂದ್ರ ಸಚಿವ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಇದ್ದಾರೆ
ಬೀದರ್ ತಾಲ್ಲೂಕಿನ ಕಾಶೆಂಪೂರ(ಪಿ)ದ ತಮ್ಮ ನಿವಾಸದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ ಅವರು ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಅವರನ್ನು ಸನ್ಮಾನಿಸಿದರು. ಕೇಂದ್ರ ಸಚಿವ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಇದ್ದಾರೆ   

ಬೀದರ್: ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಯಾವ ಪಕ್ಷದ ಅಭ್ಯರ್ಥಿಗೆ ಮತ ಹಾಕಬೇಕು ಎನ್ನುವುದು ಸದಸ್ಯರ ವಿವೇಚನೆಗೆ ಬಿಡಲಾಗಿದೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪೂರ ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯರು ಪಕ್ಷದ ಚಿಹ್ನೆ ಮೇಲೆ ಸ್ಪರ್ಧಿಸಿ ಚುನಾಯಿತರಾಗಿಲ್ಲ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜೆಡಿಎಸ್ ಸದಸ್ಯರು ಇದ್ದರೂ ಅವರು ಸ್ವಯಂ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಯಾವ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಬೇಕು ಎನ್ನುವ ಕುರಿತು ಸ್ಥಳೀಯವಾಗಿ ತೀರ್ಮಾನ ಕೈಗೊಳ್ಳುವಂತೆ ಪಕ್ಷದ ವರಿಷ್ಠರು ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ADVERTISEMENT

ಕಾಂಗ್ರೆಸ್ ಹಾಗೂ ಬಿಜೆಪಿಯ ಮುಖಂಡರು ಸಂಪರ್ಕ ಸಾಧಿಸಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ, ಕೇಂದ್ರ ಸಚಿವ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಶಾಸಕ ಬಂಡೆಪ್ಪ ಕಾಶೆಂಪೂರ ಅವರ ಮನೆಗೆ ಬಂದು ಬೆಂಬಲ ಕೋರಿದ್ದಾರೆ. ಅದಕ್ಕೆ ಪ್ರತ್ಯೇಕ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.