ಬೀದರ್: ನಗರದ ಡಿಸಿಸಿ ಬ್ಯಾಂಕ್ ಎದುರುಗಡೆ ಇರುವ ಬಾಲಾಜಿ ಎಲೆಕ್ಟ್ರಾನಿಕ್ಸ್ ಆ್ಯಂಡ್ ಎಂಟರ್‌ಪ್ರೈಸೆಸ್ ಅಂಗಡಿಗೆ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ತಗುಲಿ ಎಲೆಕ್ಟ್ರಾನಿಕ್ಸ್ ವಸ್ತುಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಸುಮಾರು ₹40 ಲಕ್ಷ ನಷ್ಟವಾಗಿದೆ ಎಂದು ಅಂಗಡಿ ಮಾಲೀಕ ವಿಠ್ಠಲ ದೇವತರಾಜ್ ಮಾರ್ಕೆಟ್ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.