ಈಶ್ವರ ಖಂಡ್ರೆ
ಬೀದರ್: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಮೂಗಲಿ ಗ್ರಾಮದಲ್ಲಿ ಮಂಗಳವಾರ ಕಾಡಾನೆ ದಾಳಿಗೆ 40 ವರ್ಷದ ಮಹಿಳೆ ಮೃತಪಟ್ಟಿರುವುದು ದುಃಖದ ಸಂಗತಿ. ಅಮೂಲ್ಯ ಜೀವ ಮರಳಿ ತರಲು ಸಾಧ್ಯವಿಲ್ಲ. ಅವರ ಕುಟುಂಬಕ್ಕೆ ಆಸರೆಯಾಗಲು ನಿಯಮಾನುಸಾರ ಪರಿಹಾರ ನೀಡಬೇಕು. ದಾಳಿ ನಡೆಸಿದ ಆನೆ ಸೆರೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಧಾವಿಸಿ ಆನೆಯನ್ನು ಮರಳಿ ಕಾಡಿಗೆ ಮರಳಿಸಲು ಅಥವಾ ಆನೆ ಸೆರೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ವನ್ಯಜೀವಿ ವಿಭಾಗದ ಹಿರಿಯ ಅಧಿಕಾರಿಗಳಿಗೆ ಸೂಚಿಸಿರುವ ಅವರು, ಕೂಡಲೇ ಸ್ಥಳಕ್ಕೆ ತೆರಳಿ ಪರಿಸ್ಥಿತಿ ನಿಭಾಯಿಸುವಂತೆ ಹಾಸನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.
ವನ್ಯಜೀವಿಗಳಿಂದ ಮಾನವ ಜೀವ ಹಾನಿ ಸಂಭವಿಸದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ಆನೆಗಳ ಸಂಚಾರದ ಬಗ್ಗೆ ಸ್ಥಳೀಯರಿಗೆ ಎಚ್ಚರಿಕೆ ಸಂದೇಶ ರವಾನಿಸಬೇಕು. ಆನೆ ಕಾರ್ಯಪಡೆ ಸಿಬ್ಬಂದಿಯನ್ನು ನಿಯೋಜಿಸಬೇಕೆಂದೂ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.