ADVERTISEMENT

ಎಂಜಿನಿಯರ್‌ಗಳು ಕೌಶಲ ಬೆಳೆಸಿಕೊಳ್ಳಲಿ

ಎಂಜಿನಿಯರ್‌ಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಸುರೇಶ ಮೆದಾ ಸಲಹೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 5:14 IST
Last Updated 16 ಸೆಪ್ಟೆಂಬರ್ 2021, 5:14 IST
ಬೀದರ್‌ನ ಡಾ.ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗ ಮಂದಿರದಲ್ಲಿ ಆಯೋಜಿಸಿದ್ದ ಎಂಜಿನಿಯರ್‌ಗಳ ದಿನಾಚರಣೆ ಕಾರ್ಯಕ್ರಮವನ್ನು ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸುರೇಶ ಮೆದಾ ಉದ್ಘಾಟಿಸಿದರು. ಶಿವಶಂಕರ ಕಾಮಶೆಟ್ಟಿ, ಅಶೋಕ ಉಪ್ಪೆ, ಅನಿಲಕುಮಾರ ಔರಾದೆ, ಗೋರಕನಾಥ ಚನಶೆಟ್ಟಿ ಇದ್ದಾರೆ
ಬೀದರ್‌ನ ಡಾ.ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗ ಮಂದಿರದಲ್ಲಿ ಆಯೋಜಿಸಿದ್ದ ಎಂಜಿನಿಯರ್‌ಗಳ ದಿನಾಚರಣೆ ಕಾರ್ಯಕ್ರಮವನ್ನು ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸುರೇಶ ಮೆದಾ ಉದ್ಘಾಟಿಸಿದರು. ಶಿವಶಂಕರ ಕಾಮಶೆಟ್ಟಿ, ಅಶೋಕ ಉಪ್ಪೆ, ಅನಿಲಕುಮಾರ ಔರಾದೆ, ಗೋರಕನಾಥ ಚನಶೆಟ್ಟಿ ಇದ್ದಾರೆ   

ಬೀದರ್: ಎಂಜಿನಿಯರ್‌ಗಳಲ್ಲಿ ಹೊಸ ಹೊಸ ಉಪಾಯಗಳು ಇರಬೇಕು ಎಂದು ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸುರೇಶ ಮೆದಾ ಸಲಹೆ ನೀಡಿದರು.

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಬೀದರ್ ಘಟಕದ ವತಿಯಿಂದ ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನದ ಪ್ರಯುಕ್ತ ನಗರದ ಡಾ. ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗ ಮಂದಿರದಲ್ಲಿ ಆಯೋಜಿಸಿದ್ದ ಎಂಜಿನಿಯರ್‌ಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೂ ಪರಿಹಾರ ಕಲ್ಪಿಸುವ ಕೌಶಲ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ADVERTISEMENT

ಸಮಾಜದಲ್ಲಿ ಎಂಜಿನಿಯರ್‌ಗಳಿಗೆ ಬಹಳ ಗೌರವ ಇದೆ. ಎಂಜಿನಿಯರ್‌ಗಳು ತಮ್ಮ ವೃತ್ತಿ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಉತ್ತಮ ಕಾರ್ಯ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಎಸಿಇ ಬೀದರ್ ಘಟಕದ ಅಧ್ಯಕ್ಷ ಅಶೋಕ ಉಪ್ಪೆ ಮಾತನಾಡಿ, ಸರ್ ಎಂ. ವಿಶ್ವೇಶ್ವರಯ್ಯ ಅವರು ದೇಶಕ್ಕೆ ಅನೇಕ ಮಹತ್ವದ ಕೊಡುಗೆಗಳನ್ನು ನೀಡಿದ್ದರು ಎಂದು ಹೇಳಿದರು.

ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಶಂಕರ ಕಾಮಶೆಟ್ಟಿ ಮಾತನಾಡಿ, ಆದರ್ಶ ವ್ಯಕ್ತಿತ್ವದ ಕಾರಣ ವಿಶ್ವೇಶ್ವರಯ್ಯ ಅವರು ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು. ಎಂಜಿನಿಯರ್‌ಗಳು ವಿಶ್ವೇಶ್ವರಯ್ಯ ಅವರ ಕರ್ತವ್ಯ ನಿಷ್ಠೆ, ಸಮಯ ಪ್ರಜ್ಞೆ ಮೊದಲಾದ ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಬೀದರ್ ಘಟಕದ ಅಧ್ಯಕ್ಷ ಅನಿಲಕುಮಾರ ಔರಾದೆ, ಖಜಾಂಚಿ ಗೋರಕನಾಥ ಚನಶೆಟ್ಟಿ, ಹಿರಿಯ ಎಂಜಿನಿಯರ್‌ಗಳಾದ ವೀರಶೆಟ್ಟಿ ಮಣಗೆ, ಹಾವಶೆಟ್ಟಿ ಪಾಟೀಲ, ರವಿ ಮೂಲಗೆ, ಶಿವಕುಮಾರ ಯಲಾಲ್, ಶಿವಕುಮಾರ ಸೋಲಪುರೆ, ಶಾಂತಕುಮಾರ ಚಂದಾ, ರಾಜಶೇಖರ ಕರ್ಪೂರ, ಪರಮೇಶ್ವರ ಕೋರಿ, ಓಂಕಾರ ಪಾಟೀಲ, ಮನೋಹರ ದಿಕ್ಷಿತ್, ಅಮರನಾಥ ಇದ್ದರು.

ಎಂಜಿನಿಯರ್‌ಗಳ ದಿನಾಚರಣೆ ಅಂಗವಾಗಿ ರಂಗ ಮಂದಿರದ ಆವರಣದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮ ಕೂಡ ನಡೆಯಿತು.
ಕಾರ್ಮಿಕರು, ಎಂಜಿನಿಯರ್‌ಗಳು ಹಾಗೂ ಸಾರ್ವಜನಿಕರು ಕೋವಿಡ್ ಲಸಿಕೆ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.