ಬೀದರ್: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಎನ್‍ಸಿಸಿ ವಿದ್ಯಾರ್ಥಿಗಳಿಂದ ಇಲ್ಲಿಯ ಬಿ.ವಿ. ಭೂಮರೆಡ್ಡಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ನಿಕಟಪೂರ್ವ ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ಬಸವರಾಜ ಪಾಟೀಲ ಅಷ್ಟೂರ, ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ್, ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ, ಬಾಬುರಾವ್ ದಾನಿ, ಡಾ. ಶರಣಪ್ಪ ಗಾಮಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.