ಬೀದರ್‌ನಲ್ಲಿ ಸೋಮವಾರ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಈಶ್ವರ ಬಿ. ಖಂಡ್ರೆ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದರು
ಬೀದರ್: ಬಿರುಸಿನ ಮಳೆಯ ನಡುವೆ ಇಲ್ಲಿನ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಜನತಾ ದರ್ಶನ ಮುಂದುವರೆದಿದೆ.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಮಧ್ಯಾಹ್ನ ಒಂದು ಗಂಟೆಯಿಂದ ಬಿಡುವಿಲ್ಲದೆ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದಾರೆ.
ಗಂಟೆಯಿಂದ ಗುಡುಗು ಸಹಿತ ಸುರಿಯುತ್ತಿರುವ ಬಿರುಸಿನ ಮಳೆ ಸುರಿಯುತ್ತಿದ್ದು, ಅಹವಾಲು ಸಲ್ಲಿಕೆಗೆ ಬಂದವರು ರಂಗಮಂದಿರದಲ್ಲೇ ಉಳಿಯುವಂತಾಗಿದೆ. ವಿವಿಧ ಇಲಾಖೆಯ ಅಧಿಕಾರಿಗಳು ಕೂಡ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.