ADVERTISEMENT

‘ಕಲಾವಿದರ ಹೆಸರಲ್ಲಿ ಟ್ರಸ್ಟ್ ಸ್ಥಾಪಿಸಿ’

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 15:19 IST
Last Updated 12 ಅಕ್ಟೋಬರ್ 2021, 15:19 IST
ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಪದಾಧಿಕಾರಿಗಳು ಕಲಬುರ್ಗಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ ಅವರಿಗೆ ವಿವಿಧ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು
ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಪದಾಧಿಕಾರಿಗಳು ಕಲಬುರ್ಗಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ ಅವರಿಗೆ ವಿವಿಧ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು   

ಬೀದರ್: ಕಲ್ಯಾಣ ಕರ್ನಾಟಕ ಭಾಗದ ಸಾಧಕ ಕಲಾವಿದರು ಹಾಗೂ ಸಾಹಿತಿಗಳ ಹೆಸರಲ್ಲಿ ಸರ್ಕಾರ ಟ್ರಸ್ಟ್ ಹಾಗೂ ಪ್ರತಿಷ್ಠಾನಗಳನ್ನು ಸ್ಥಾಪಿಸಬೇಕು ಎಂದು ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಒತ್ತಾಯಿಸಿದೆ.

ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಂಗಡಿ ಅವರು ಈ ಕುರಿತು ಕಲಬುರ್ಗಿಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಜಯದೇವಿ ತಾಯಿ ಲಿಗಾಡೆ, ಎಂ.ಆರ್. ಬುದ್ಧಿವಂತ ಶೆಟ್ಟರ್, ಪಂಡಿತ ಸಿದ್ಧರಾಮ ಜಂಬಲದಿನ್ನಿ, ಎಂ.ಪಿ. ಪ್ರಕಾಶ, ಡಾ. ಸಿದ್ಧಯ್ಯ ಪುರಾಣಿಕ, ಸುಭದ್ರಮ್ಮ ಮನ್ಸೂರ್ ಹೆಸರಲ್ಲಿ ಟ್ರಸ್ಟ್ ಸ್ಥಾಪಿಸಬೇಕು. ಕಲಾವಿದರಿಗೆ ಮಾಸಾಶನ ಕಲ್ಪಿಸಬೇಕು. ಕಲ್ಯಾಣ ಕರ್ನಾಟಕದಲ್ಲಿ ಉತ್ಸವಗಳನ್ನು ಹಮ್ಮಿಕೊಳ್ಳಬೇಕು ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.