
ಪ್ರಜಾವಾಣಿ ವಾರ್ತೆಬೀದರ್: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಸಿಪಾಯಿ, ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಚೇರಿಯಲ್ಲಿ ಗುರುವಾರ ಸಂಜೆ ಇಇ ರಾಮಲಿಂಗಪ್ಪ ಬಿರಾದಾರ ಮತ್ತು ಸಿಪಾಯಿ ಬಾಬು, ಗುತ್ತಿಗೆದಾರನಿಂದ ₹50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿ, ನಗದು ಜಪ್ತಿ ಮಾಡಿದ್ದಾರೆ.
ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರನ ಹಣ ಬಿಡುಗಡೆಗೆ ₹50 ಸಾವಿರ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಎಸ್‌ಪಿ ಸಿದ್ದರಾಜು, ಡಿವೈಎಸ್‌ಪಿ ಹನುಮಂತರಾಯ್ ನೇತೃತ್ವದ ತಂಡ ದಾಳಿ ನಡೆಸಿದೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.