ADVERTISEMENT

ಹೆಚ್ಚುವರಿ ಜಮೀನು ಜಲಾವೃತ್ತ: ಪರಿಹಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಜೂನ್ 2021, 12:55 IST
Last Updated 19 ಜೂನ್ 2021, 12:55 IST
ಬೀದರ್‌ನಲ್ಲಿ ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿದ ಮನವಿ ಪತ್ರವನ್ನು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹೂಚಕನಳ್ಳಿ ಹಾಗೂ ನಿರ್ದೇಶಕ ವೀರಭದ್ರಪ್ಪ ಉಪ್ಪಿನ್ ಪ್ರದರ್ಶಿಸಿದರು
ಬೀದರ್‌ನಲ್ಲಿ ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿದ ಮನವಿ ಪತ್ರವನ್ನು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹೂಚಕನಳ್ಳಿ ಹಾಗೂ ನಿರ್ದೇಶಕ ವೀರಭದ್ರಪ್ಪ ಉಪ್ಪಿನ್ ಪ್ರದರ್ಶಿಸಿದರು   

ಬೀದರ್: ಕಾರಂಜಾ ಯೋಜನೆಯಲ್ಲಿ ಸ್ವಾಧೀನಪಡಿಸಿಕೊಳ್ಳದ ಹೆಚ್ಚುವರಿ ಜಮೀನು ಜಲಾವೃತ್ತವಾಗಿರುವ ಕಾರಣ ರೈತರಿಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ.

ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹೂಚಕನಳ್ಳಿ ಹಾಗೂ ನಿರ್ದೇಶಕ ವೀರಭದ್ರಪ್ಪ ಉಪ್ಪಿನ್ ಅವರು ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಕಾರಂಜಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಇರುವ ಸುಮಾರು 1,200 ಎಕರೆ ಹೆಚ್ಚುವರಿ ಜಮೀನನ್ನು ಇನ್ನೂ ಸ್ವಾಧೀನಪಡಿಸಿಕೊಳ್ಳಲಾಗಿಲ್ಲ. ಈ ಜಮೀನಿನಲ್ಲಿ ಮಳೆ ನೀರು ನಿಲ್ಲುವುದು ಆರಂಭವಾಗಿದೆ. ಬೆಳೆ ಬೆಳೆಯಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.

ADVERTISEMENT

ಹೈದರಾಬಾದ್ ಹಾಗೂ ಮುಂಬೈನಲ್ಲಿ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಯೋಜನೆ ಸಂತ್ರಸ್ತರು ಲಾಕ್‍ಡೌನ್ ಪ್ರಯುಕ್ತ ಊರಿಗೆ ಮರಳಿದ್ದಾರೆ. ಅವರಿಗೆ ಮಾಡಲು ಕೆಲಸ ಇಲ್ಲ. ಇರುವ ಅತ್ಯಲ್ಪ ಜಮೀನಿನಲ್ಲೂ ನೀರು ಸಂಗ್ರಹವಾಗಿರುವುದರಿಂದ ಸಂಕಷ್ಟದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.