ADVERTISEMENT

ರೈತ, ಸೇನೆ, ಸಂಸ್ಕೃತಿ ಗೌರವಿಸಿ: ವಸಂತಕುಮಾರ ಸಲಹೆ

ಉಪನ್ಯಾಸ ಕಾರ್ಯಕ್ರಮಗಳ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2022, 1:54 IST
Last Updated 30 ಜೂನ್ 2022, 1:54 IST
ಆಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಬೀದರ್‌ನ ಬಿ.ವಿ. ಭೂಮರೆಡ್ಡಿ ಕಾಲೇಜಿನಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮವನ್ನು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಉದ್ಘಾಟಿಸಿದರು
ಆಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಬೀದರ್‌ನ ಬಿ.ವಿ. ಭೂಮರೆಡ್ಡಿ ಕಾಲೇಜಿನಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮವನ್ನು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಉದ್ಘಾಟಿಸಿದರು   

ಬೀದರ್: ‘ಯುವಕರು ಅನ್ನ ಕೊಡುವ ರೈತ, ರಕ್ಷಿಸುವ ಸೇನೆ ಹಾಗೂ ದೇಶದ ಸಂಸ್ಕೃತಿಯನ್ನು ಗೌರವಿಸಬೇಕು’ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಬಿ.ವಿ.ವಸಂತಕುಮಾರ ಹೇಳಿದರು.

ಮಾತೃಭೂಮಿ ಸೇವಾ ಪ್ರತಿಷ್ಠಾನ, ಕನ್ನಡ ಸಾಹಿತ್ಯ ಪರಿಷತ್ತಿನ ಯುವ ಘಟಕ ಹಾಗೂ ಸಮರ್ಥ ಸೇವಾ ಸಂಸ್ಥೆ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಇಲ್ಲಿಯ ಬಿ.ವಿ. ಭೂಮರಡ್ಡಿ ಕಾಲೇಜಿನಲ್ಲಿ ನಡೆದ 75 ಉಪನ್ಯಾಸ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಸ್ವಾತಂತ್ರ್ಯಕ್ಕಾಗಿ ಬಹಳ ಹೋರಾಟಗಳು ನಡೆದಿವೆ. ಲಕ್ಷಾಂತರ ಜನ ಬಲಿದಾನ ನೀಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಳ ನೈಜ ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಹೇಳಿದರು.

ADVERTISEMENT

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಕಾರ್ಯಕ್ರಮ ಉದ್ಘಾಟಿಸಿದರು.

ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಜ್ಯೋತಿರ್ಮಯಾನಂದ ಸ್ವಾಮೀಜಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ವಿಜಯಕುಮಾರ ಪಾಟೀಲ ಗಾದಗಿ ಹಾಗೂ ಮಾತೃಭೂಮಿ ಸೇವಾ ಪ್ರತಿಷ್ಠಾನದ ಸಂಸ್ಥಾಪಕ ಗುರುನಾಥ ರಾಜಗೀರಾ ಮಾತನಾಡಿದರು.

ಉಪಪ್ರಾಚಾರ್ಯ ಪ್ರೊ.ಅನಿಲಕುಮಾರ ಆಣದೂರೆ ಅಧ್ಯಕ್ಷತೆ ವಹಿಸಿದ್ದರು. ವಿ.ಎಂ.ಚನಶೆಟ್ಟಿ, ಬಸವರಾಜ ರಾಯಕೋಟಿ, ಬಸವರಾಜ ಬಿರಾದಾರ, ಬಸವ ಮೂಲಗೆ, ವಿಶಾಲ ಬಾದಾಮಿ ಇದ್ದರು.

ಸಮರ್ಥ ಸೇವಾ ಸಂಸ್ಥೆಯ ಕಾರ್ಯದರ್ಶಿಗಳಾದ ವೀರೇಶ ಸ್ವಾಮಿ ಅವರು ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.