ಚಿಟಗುಪ್ಪ: ತಾಲ್ಲೂಕಿನ ಹಣಕುಣಿ ಗ್ರಾಮದ ಸ್ವಂತ ಮನೆಯಲ್ಲಿ ರೈತರೊಬ್ಬರು ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಮಲಾಕರ್ ತುಕ್ಕಪ್ಪ ಸಾಗರ (34) ನೇಣಿಗೆ ಶರಣಾದವರು. ಇಟಗಾ ಗ್ರಾಮದ ಪ್ರಾಥಮಿಕ ಪತ್ತಿನ ಸಹಕಾರ ನಿಯಮಿತದಲ್ಲಿ ₹ 1 ಲಕ್ಷ, ಚಿಟಗುಪ್ಪ ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಯಲ್ಲಿ ₹2.85 ಲಕ್ಷ ಸಾಲ ಮಾಡಿದ್ದರು ಎಂದು ಕುಟುಂದಬವರು ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.