ಸಾವು
(ಪ್ರಾತಿನಿಧಿಕ ಚಿತ್ರ)
ಟಿ.ಮರ್ಜಾಪುರ(ಜನವಾಡ): ಬೀದರ್ ತಾಲ್ಲೂಕಿನ ಟಿ.ಮರ್ಜಾಪುರ ಗ್ರಾಮದ ರೈತ ಸುಭಾಷ ಮಾರುತಿ ಹಾಸಗೊಂಡ(65) ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬುಧವಾರ ರಾತ್ರಿ ಮನೆಯಲ್ಲೇ ವಿಷ ಸೇವಿಸಿದ್ದ ಅವರನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಸುಭಾಷ್ ಕೃಷಿಗಾಗಿ ಸಾಲ ಮಾಡಿಕೊಂಡಿದ್ದರು. ಅವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಬಗದಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.