ADVERTISEMENT

ರೈತರ ಹಿತ ಕಾಪಾಡಲು ಸರ್ಕಾರ ವಿಫಲ: ಪ್ರಕಾಶ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2025, 5:17 IST
Last Updated 30 ನವೆಂಬರ್ 2025, 5:17 IST
ಭಾಲ್ಕಿ ಪಟ್ಟಣದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ ಬಿಜೆಪಿ ಮುಖಂಡರೂ ಆದ ಮಾಜಿ ಶಾಸಕ ಪ್ರಕಾಶ ಖಂಡ್ರೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಪಿ.ಎಂ.ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಿದರು
ಭಾಲ್ಕಿ ಪಟ್ಟಣದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ ಬಿಜೆಪಿ ಮುಖಂಡರೂ ಆದ ಮಾಜಿ ಶಾಸಕ ಪ್ರಕಾಶ ಖಂಡ್ರೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಪಿ.ಎಂ.ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಿದರು   

ಭಾಲ್ಕಿ: ‘ರೈತರ ಹಿತ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಬಿಜೆಪಿ ಮುಖಂಡರೂ ಆದ ಮಾಜಿ ಶಾಸಕ ಪ್ರಕಾಶ ಖಂಡ್ರೆ ದೂರಿದರು.

ಪಟ್ಟಣದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಪಿ.ಎಂ.ಮಲ್ಲಿಕಾರ್ಜುನ ಅವರಿಗೆ ಸಲ್ಲಿಸಿ ಮಾತನಾಡಿದರು.

‘ಘೋಷಣೆ ಮಾಡಿರುವ ಪರಿಹಾರವನ್ನು ಶೀಘ್ರ ಅವರ ಖಾತೆಗೆ ಜಮೆ ಮಾಡಬೇಕು. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿದಂತೆ ಹಾಲಿನ ಪ್ರೋತ್ಸಾಹ ಧನವನ್ನು ₹7 ರೂಪಾಯಿಗೆ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ರೈತರೊಂದಿಗೆ ಸೇರಿ ಉಗ್ರ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.

ADVERTISEMENT

ಅಂಬೇಡ್ಕರ್ ವೃತ್ತದಿಂದ ಸಹಾಯಕ ಕೃಷಿ ನಿರ್ದೇಶಕರ ಕಚೇರಿವರೆಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಲಾಯಿತು.

ತಾಲ್ಲೂಕು ಅಧ್ಯಕ್ಷ ವೀರಣ್ಣ ಕಾರಬಾರಿ, ಮುಖಂಡರಾದ ಶಿವರಾಜ ಗಂದಗೆ, ಅಶೋಕ ಪಾಟೀಲ, ಗೋವಿಂದರಾವ್ ಬಿರಾದಾರ, ಲುಂಬಿಣಿ ಗೌತಮ, ಕೆ.ಡಿ.ಗಣೇಶ, ಜಗನ್ನಾಥ ಬಿರಾದಾರ, ವೆಂಕಟ ಬಿರಾದಾರ, ಪಂಡಿತ ಶಿರೋಳೆ, ಕಿಶನರಾವ್ ಪಾಟೀಲ, ಕಿರಣ ಖಂಡ್ರೆ ವೆಂಕಟ್ ಲಾಳೆ, ಜಗದೀಶ ಕನ್ನಾಳೆ, ಶಫಿ ಭಾತಂಬ್ರಾ, ಬಾಬುರಾವ್ ಧೂಪೆ, ಸಂಜೀವ ಸಿಂಧೆ, ದತ್ತಾತ್ರಿ ಪಾಟೀಲ, ಸಂಗಮೇಶ ಕಾರಾಮುಂಗೆ, ಸಿದ್ದು ಕಾಡಾದಿ, ಸಂತೋಷ ಪಾಟೀಲ, ಪಂಡರಿ ಮೇತ್ರೆ, ಡಾ. ಜಗದೀಶ ಭುರೆ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.