ADVERTISEMENT

ಪಂಚಾಯಿತಿಗಳಲ್ಲಿ ರೈತರ ಕ್ರಿಯಾ ಯೋಜನೆ ಅಭಿಯಾನ

ಪ್ರಚಾರ ವಾಹನಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಗಂಗ್ವಾರ್ ಚಾಲನೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2020, 16:46 IST
Last Updated 7 ಅಕ್ಟೋಬರ್ 2020, 16:46 IST
ಬೀದರ್ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಅವರು ರೈತರ ಕ್ರಿಯಾಯೋಜನೆ ಅಭಿಯಾನ ಪ್ರಚಾರ ವಾಹನಕ್ಕೆ ಬುಧವಾರ ಚಾಲನೆ ನೀಡಿದರು
ಬೀದರ್ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಅವರು ರೈತರ ಕ್ರಿಯಾಯೋಜನೆ ಅಭಿಯಾನ ಪ್ರಚಾರ ವಾಹನಕ್ಕೆ ಬುಧವಾರ ಚಾಲನೆ ನೀಡಿದರು   

ಬೀದರ್: ರೈತರ ಕ್ರಿಯಾಯೋಜನೆ ಅಭಿಯಾನ ಪ್ರಚಾರ ವಾಹನಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಇಲ್ಲಿಯ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಬುಧವಾರ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯು ರೈತರ ಅಭಿವೃದ್ಧಿಗಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಅವರು ಹೇಳಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2021-22ನೇ ಸಾಲಿಗೆ ಕಾರ್ಮಿಕ ಆಯವ್ಯಯ ತಯಾರಿಸಲು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ರೈತರ ಕ್ರಿಯಾ ಯೋಜನೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ADVERTISEMENT

ತಮ್ಮ ಜಮೀನುಗಳಲ್ಲಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಬಯಸುವ ರೈತರು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಬೀದರ್ ತಾಲ್ಲೂಕಿನ ಎಲ್ಲ ಪಂಚಾಯಿತಿಗಳಲ್ಲಿ ಕಾಮಗಾರಿ ಬೇಡಿಕೆ ಅಭಿಯಾನ ಮತ್ತು ಅನುಷ್ಠಾನ ಪ್ರಕ್ರಿಯೆ ಅಕ್ಟೋಬರ್ 15ರ ವರೆಗೆ ನಡೆಯಲಿದೆ. ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಹತ್ತಿರದ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಬಹುದು ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವಿಜಯಕುಮಾರ ರಾಮಲು ಬರೂರು, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿಗಳಾದ ಮಡೋಳಪ್ಪ ಪಿ.ಎಸ್., ನೋಡಲ್ ಅಧಿಕಾರಿ ಮಾರುತಿರಾವ್ ಜಾಬೋನರ್, ಬೀದರ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಧನರಾಜ್ ಬೋರಾಳೆ, ತಾಲ್ಲೂಕು ಪಂಚಾಯಿತಿ ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಶರತಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.