ADVERTISEMENT

ನಾಲ್ವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2022, 16:32 IST
Last Updated 16 ಆಗಸ್ಟ್ 2022, 16:32 IST
ಔರಾದ್ ತಾಲ್ಲೂಕಿನ ಎಕಲಾರ ಸರ್ಕಾರಿ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು
ಔರಾದ್ ತಾಲ್ಲೂಕಿನ ಎಕಲಾರ ಸರ್ಕಾರಿ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು   

ಔರಾದ್: ತಾಲ್ಲೂಕಿನ ಎಕಲಾರ ಗ್ರಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ನಾಲ್ವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾದ ಗ್ರಾಮದ ನಿಕಿತಾ ಶಿವಕುಮಾರ, ಭಾಗ್ಯವಂತಿ ಬಸವಣಪ್ಪ ಸ್ವಾಮಿ ಹಾಗೂ ಪಿಯುಸಿ ಪರೀಕ್ಷೆ ಯಲ್ಲಿ ಸಾಧನೆ ಮಾಡಿದ ಅಮರ ಉಮಾಕಾಂತ, ಸಿದ್ಧಾರ್ಥ ಮುದಾಳೆ ಅವರಿಗೆ ಪ್ರತಿಭಾ ಪುರಸ್ಕಾರ ಹಾಗೂ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. ಮುಖ್ಯಶಿಕ್ಷಕ ಪ್ರಭುರಾವ ಬಾಳೂರೆ ಹಾಗೂ ಜ್ಞಾನದೇವ ಪಾಂಚಾಳ ಅವರು ಪುರಸ್ಕಾರ ವಿತರಿಸಿ ಮಾತನಾಡಿದರು.

ಶಿಕ್ಷಕ ಜೈಸಿಂಗ್ ಠಾಕೂರ್ ಅವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ನೋಟ್‍ಬುಕ್ ಹಾಗೂ ಪೆನ್ ವಿತರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸಮರ್ಥ ಪಾಟೀಲ, ಪಿಡಿಒ ವಿಜಯಲಕ್ಷ್ಮಿ ಪಾಟೀಲ, ಎಸ್‌ಡಿಎಂಸಿ ಅಧ್ಯಕ್ಷ ಶಿವಕುಮಾರ ಪಾಟೀಲ, ಬಸವರಾಜ ಮಣೆಗಂಪುರ, ಮಲ್ಲಿಕಾರ್ಜುನ ಹಿಪ್ಪಳಗಾವೆ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.