ADVERTISEMENT

ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 31 ಜುಲೈ 2021, 16:15 IST
Last Updated 31 ಜುಲೈ 2021, 16:15 IST
ಬೀದರ್‍ನ ಗುರುನಾನಕ ಪಬ್ಲಿಕ್ ಸ್ಕೂಲ್‍ನಲ್ಲಿ ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್ ಅವರು ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು
ಬೀದರ್‍ನ ಗುರುನಾನಕ ಪಬ್ಲಿಕ್ ಸ್ಕೂಲ್‍ನಲ್ಲಿ ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್ ಅವರು ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು   

ಬೀದರ್: ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಇಲ್ಲಿಯ ಗುರುನಾನಕ ಪಬ್ಲಿಕ್ ಸ್ಕೂಲ್‍ನಲ್ಲಿ ಶನಿವಾರ ಸನ್ಮಾನಿಸಲಾಯಿತು.

ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ ಓಂಪ್ರಕಾಶ ದಿಲೀಪಕುಮಾರ, ವೈಷ್ಣವಿ ಧನ್ನೂರೆ, ಭಂಡಾರಿ ಶ್ರೇಯಾ, ಅಭಿಷೇಕಕುಮಾರ ವಿನೋದ ಪ್ರಕಾಶ, ತಾರಿನಿ ವರ್ಮಾ, ಅನುಪಮಾ ಧನರಾಜ, ಸಾಗರ್ ಪಾಲ್, ಓಂ ಶಿವರಾಜ ಅವರನ್ನು ಗುರುನಾನಕ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್ ಶಾಲು ಹೊದಿಸಿ ಸನ್ಮಾನಿಸಿದರು.

ಆಡಳಿತ ಮಂಡಳಿ ಮಾರ್ಗದರ್ಶನ, ಉಪನ್ಯಾಸಕರ ಪರಿಣಾಮಕಾರಿ ಬೋಧನೆ, ಪಾಲಕರ ಸಹಕಾರ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದಾಗಿ ಅತ್ಯುತ್ತಮ ಫಲಿತಾಂಶ ಬಂದಿದೆ ಎಂದು ಹೇಳಿದರು.

ADVERTISEMENT

ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಸಲಹೆ ಮಾಡಿದರು.

ಪ್ರಾಚಾರ್ಯ ಎನ್. ರಾಜು, ಪವನಾಪ್ರಿಯಾ, ಮುಖ್ಯಶಿಕ್ಷಕಿ ಆರೀಫ್ ಹಾದಿ, ಪದವಿಪೂರ್ವ ಕಾಲೇಜು ಪ್ರಾಚಾರ್ಯೆ ಅಪರಂಜಿನಿ, ಆಡಳಿತಾಧಿಕಾರಿ ಜಯಪ್ರಕಾಶ ಸ್ಯಾಮುವೆಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.