ADVERTISEMENT

ಕೊರೊನಾ ವಾರಿಯರ್ಸ್‍ಗೆ ಸನ್ಮಾನ

ಜನಸೇವಾ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2020, 15:48 IST
Last Updated 15 ಆಗಸ್ಟ್ 2020, 15:48 IST
ಬೀದರ್‌ನ ಪ್ರತಾಪನಗರದ ಜನಸೇವಾ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ ಗೀತಾ ಬೋರೆ ಅವರನ್ನು ಸನ್ಮಾನಿಸಲಾಯಿತು
ಬೀದರ್‌ನ ಪ್ರತಾಪನಗರದ ಜನಸೇವಾ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ ಗೀತಾ ಬೋರೆ ಅವರನ್ನು ಸನ್ಮಾನಿಸಲಾಯಿತು   

ಬೀದರ್: ಇಲ್ಲಿಯ ಪ್ರತಾಪನಗರದ ಜನಸೇವಾ ಶಿಶು ಮಂದಿರ, ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ 74ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್‍ಗೆ ಸನ್ಮಾನಿಸಲಾಯಿತು.

ಮೂರು ತಿಂಗಳ ಕಾಲ ಕೊರೊನಾ ವಾರಿಯರ್ ಆಗಿ ಕಾರ್ಯ ನಿರ್ವಹಿಸಿದ್ದ ನಿವೃತ್ತ ಎಎಸ್‍ಐ ಷಣ್ಮುಖಯ್ಯ ಸ್ವಾಮಿ ಹಾಗೂ ಆಶಾ ಕಾರ್ಯಕರ್ತೆ ಗೀತಾ ಬೋರೆ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

ಜನಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ಮಾತನಾಡಿ, ಮಹಾಮಾರಿ ಕೊರೊನಾ ತಡೆ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ವೈದ್ಯರು, ಶುಶ್ರೂಷಕರು, ಪೊಲೀಸರು, ಆಶಾ ಕಾರ್ಯಕರ್ತೆಯರು ಹಾಗೂ ಪೌರ ಕಾರ್ಮಿಕರ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.

ADVERTISEMENT

ಕೊರೊನಾ ವಿರುದ್ಧದ ಸಮರದಲ್ಲಿ ಗೆಲ್ಲಲು ಪ್ರತಿಯೊಬ್ಬರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಯಗಳಿಗೆ ಕೈಜೋಡಿಸಬೇಕಾಗಿದೆ ಎಂದು ತಿಳಿಸಿದರು.

ಮಹಾತ್ಮ ಗಾಂಧೀಜಿ ಸೇರಿದಂತೆ ಅನೇಕ ಮಹಾ ಪುರುಷರ ತ್ಯಾಗ, ಬಲಿದಾನದಿಂದಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಪ್ರತಿಯೊಬ್ಬರು ದೇಶಪ್ರೇಮ, ದೇಶಾಭಿಮಾನ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರಮುಖರಾದ ಶಿವಲಿಂಗಪ್ಪ ಜಲಾದೆ, ಶಿವರಾಜ ಹೂಡೆದ, ಶಾಲೆಯ ಆಡಳಿತಾಧಿಕಾರಿ ಸೌಭಾಗ್ಯವತಿ, ಮುಖ್ಯ ಶಿಕ್ಷಕಿ ನೀಲಮ್ಮ ಚಾಮರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.