ADVERTISEMENT

'ಹಬ್ಬ: ಕೋವಿಡ್ ಕಾರ್ಯಗಳಿಂದ ವಿನಾಯಿತಿ ಕಲ್ಪಿಸಿ'

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 14:40 IST
Last Updated 22 ಡಿಸೆಂಬರ್ 2021, 14:40 IST
ಕ್ರಿಸ್‍ಮಸ್ ಹಾಗೂ ಎಳ್ಳ ಅಮಾವಾಸ್ಯೆಗೆ ಕೋವಿಡ್ ಕಾರ್ಯಗಳಿಂದ ವಿನಾಯಿತಿ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್‍ನಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಅವರಿಗೆ ಮನವಿ ಪತ್ರ ಸಲ್ಲಿಸಿದರು

ಬೀದರ್: ಕ್ರಿಸ್‍ಮಸ್ ಹಾಗೂ ಎಳ್ಳ ಅಮಾವಾಸ್ಯೆ ಪ್ರಯುಕ್ತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರಿಗೆ ಕೋವಿಡ್ ಕಾರ್ಯಗಳಿಂದ ವಿನಾಯಿತಿ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾ ಘಟಕ ಆಗ್ರಹಿಸಿದೆ.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಕುಮಾರ ಮಾಳಗೆ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರು ಎರಡು ವರ್ಷಗಳ ಕಾಲ ಹಬ್ಬ ಹರಿದಿನಗಳನ್ನು ಮರೆತು ಯಾವುದೇ ರಜೆ ಪಡೆಯದೇ ಕೋವಿಡ್ ನಿಯಂತ್ರಣಕ್ಕೆ ಶ್ರಮಿಸಿದ್ದಾರೆ. ಇದೀಗ ಕ್ರಿಸ್‍ಮಸ್ ಹಾಗೂ ಎಳ್ಳ ಅಮಾವಾಸ್ಯೆ ಹಬ್ಬಕ್ಕೆ ಹಕ್ಕಿನ ರಜೆ ನೀಡಬೇಕು. ಈ ಮೂಲಕ ನೌಕರರಿಗೆ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ADVERTISEMENT

ಪ್ರಯೋಗಶಾಲಾ ಅಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಯೇಸುದಾಸ ಥೋರೆ, ಪ್ರೈಮರಿ ಹೆಲ್ತ್ ಕೇರ್ ಆಫಿಸರ್ಸ್ ಅಸೋಸಿಯೇಷನ್ ಜಿಲ್ಲಾ ಘಟಕದ ಅಧ್ಯಕ್ಷೆ ಶಕುಂತಲಾ ದಂಡಿನ್, ಪ್ರಕಾಶ ಮಹಿಮಾಕರ್, ವಿಲ್ಸನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.