ADVERTISEMENT

ಬೀದರ್ | ಹೊತ್ತಿ‌ ಉರಿದ KKRTC ಬಸ್: ಪ್ರಯಾಣಿಕರು ಪಾರು

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2025, 7:04 IST
Last Updated 19 ಮಾರ್ಚ್ 2025, 7:04 IST
<div class="paragraphs"><p>ಹೊತ್ತಿ ಉರಿದ&nbsp;ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್</p></div>

ಹೊತ್ತಿ ಉರಿದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್

   

ಔರಾದ್: ತಾಲ್ಲೂಕಿಗೆ ಸಮೀಪದ ಕಪ್ಪೆಕೇರಿ ಬಳಿ ಬುಧವಾರ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಿ ಉರಿದಿದೆ.

ಬೀದರ್ ಕಡೆಯಿಂದ ಬರುತ್ತಿದ್ದ ಔರಾದ್ ಘಟಕದ ಬಸ್ ಕಪ್ಪೆಕೇರಿ ಬಳಿ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಭಯಭೀತರಾದ ಪ್ರಯಾಣಿಕರು ಬಸ್‌ನಿಂದ ಕೆಳಗಿಳಿಯುತ್ತಿದ್ದಂತೆ ಹೊಗೆ ಬೆಂಕಿಯಾಗಿ ಇಡೀ ಬಸ್ ಧಗ ಧಗನೇ ಹೊತ್ತಿ‌ ಉರಿದಿದೆ. ತಕ್ಷಣ ಸ್ಥಳಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ‌ ನಂದಿಸಿದರು.

ADVERTISEMENT

‘ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಬಸ್ಸಿನಲ್ಲಿದ್ದ 25 ಪ್ರಯಾಣಿಕರನ್ನು ಕೆಳಗೆ ಇಳಿಸಲಾಗಿದೆ. ಹೀಗಾಗಿ ಯಾವುದೇ ಅನಾಹುತ ಆಗಿಲ್ಲ’ ಎಂದು ಇಲ್ಲಿಯ ಘಟಕ ವ್ಯವಸ್ಥಾಪಕ ರಾಜೇಂದ್ರ 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.