ADVERTISEMENT

ವಿದ್ಯುತ್ ತಂತಿ ಕಡಿದು ಕಬ್ಬಿಗೆ ಬೆಂಕಿ: ಹಾನಿ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2023, 5:39 IST
Last Updated 16 ಫೆಬ್ರುವರಿ 2023, 5:39 IST
ಖಟಕಚಿಂಚೋಳಿ ಸಮೀಪದ ಡಾವರಗಾಂವ್ ಗ್ರಾಮದಲ್ಲಿ ವಿದ್ಯುತ್ ತಂತಿ ಕಡಿದು ಕಬ್ಬು ಸುಟ್ಟು ಹೋಗಿರುವುದು
ಖಟಕಚಿಂಚೋಳಿ ಸಮೀಪದ ಡಾವರಗಾಂವ್ ಗ್ರಾಮದಲ್ಲಿ ವಿದ್ಯುತ್ ತಂತಿ ಕಡಿದು ಕಬ್ಬು ಸುಟ್ಟು ಹೋಗಿರುವುದು   

ಖಟಕಚಿಂಚೋಳಿ: ಸಮೀಪದ ಡಾವರಗಾಂವ್ ಗ್ರಾಮದಲ್ಲಿ ವಿದ್ಯುತ್ ತಂತಿ ಕಡಿದು ರೈತ ವಿನಾಯಕ ಕೆರೋಬಾ ಹಾಲಹಳ್ಳೆ ಅವರ ₹3 ಲಕ್ಷ ಮೌಲ್ಯದ ಕಬ್ಬು ಸುಟ್ಟು ಹೋಗಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಗ್ರಾಮಸ್ಥರು ಸ್ವತಃ ಬೆಂಕಿ ಆರಿಸಲು ಪ್ರಯತ್ನಿಸಿದರು. ನಂದಿಸಲು ಆಗಲಿಲ್ಲ. ತಕ್ಷಣ ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿದರು. ಅಗ್ನಿ ಶಾಮಕ ದಳದ ಸಿಬ್ಬಂದಿ ಬರುವಷ್ಟರಲ್ಲಿ ಅರ್ಧದಷ್ಟು ಕಬ್ಬಿನ ಗದ್ದೆ ಬೆಂಕಿಗೆ ಸುಟ್ಟು ಹೋಗಿದೆ.

ಹೊಲದ ಮೇಲಿಂದ ಹಾದುಹೋಗಿರುವ ವಿದ್ಯುತ್‌ ತಂತಿಗಳು ಜೋತು ಬಿದ್ದಿವೆ. ಇದರಿಂದ ತಂತಿಗಳು ತಾಗಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಬಿದ್ದಿದೆ. ಜೆಸ್ಕಾಂ ಅಧಿಕಾರಿಗಳಿಗೆ ವಿದ್ಯುತ್‌ ತಂತಿಗಳು ಜೋತು ಬಿದ್ದಿರುವ ಬಗ್ಗೆ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮದ ರಾಜಶೇಖರ ಶೇರಿಕಾರ ಅಸಮಾಧಾನ ವ್ಯಕ್ತಪಡಿಸುತ್ತಾರೆ. ಕಬ್ಬಿಗೆ ಬೆಂಕಿ ಹತ್ತಿರುವುದಕ್ಕೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಆದ್ದರಿಂದ ಸಂಕಷ್ಟದಲ್ಲಿರುವ ರೈತನಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.