ADVERTISEMENT

ಕನ್ನಡ ಬಾವುಟಕ್ಕೆ ಬೆಂಕಿ: ನಟ ಹಣ್ಮುಪಾಜಿ ಖಂಡನೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2021, 13:51 IST
Last Updated 20 ಡಿಸೆಂಬರ್ 2021, 13:51 IST
ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕೆಲ ಕಿಡಿಗೇಡಿಗಳು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿರುವುದನ್ನು ವಿರೋಧಿಸಿ ಬೀದರ್‌ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಉದ್ಧವ ಠಾಕ್ರೆ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು
ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕೆಲ ಕಿಡಿಗೇಡಿಗಳು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿರುವುದನ್ನು ವಿರೋಧಿಸಿ ಬೀದರ್‌ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಉದ್ಧವ ಠಾಕ್ರೆ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು   

ಬೀದರ್: ನೆರೆಯ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕೆಲ ಕಿಡಿಗೇಡಿಗಳು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿರುವುದನ್ನು ಜಿಲ್ಲೆಯವರೇ ಆದ ಚಿತ್ರನಟ ಹಣ್ಮುಪಾಜಿ ತೀವ್ರವಾಗಿ ಖಂಡಿಸಿದ್ದಾರೆ.

ಕಿಡಿಗೇಡಿಗಳು ಕನ್ನಡ ಧ್ವಜವನ್ನು ಸುಟ್ಟು ಹಾಕಿ ವಿಕೃತಿ ಮೆರೆದಿರುವುದು ಅತ್ಯಂತ ಹೀನ ಕೃತ್ಯ. ಬಾವುಟ ಕನ್ನಡಿಗರ ಅಸ್ಮಿತೆ. ಸ್ವಾಭಿಮಾನದ ಸಂಕೇತವೂ ಹೌದು. ಬಾವುಟಕ್ಕೆ ಅಪಮಾನ ಮಾಡುವುದನ್ನು ಸಹಿಸಲಾಗದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ನಾಡದ್ರೋಹಿಗಳನ್ನು ಕೂಡಲೇ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ಕನ್ನಡ ವಿರೋಧಿ ಕೃತ್ಯ ಮುಂದುವರಿಸಿದರೆ ನಾಡಿನ ಕನ್ನಡಿಗರೇ ಬೆಳಗಾವಿಗೆ ತೆರಳಿ ಎಂ.ಇ.ಎಸ್. ಪುಂಡರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.