
ಬೀದರ್: ರಾಜ್ಯ ಸರ್ಕಾರವು ರಾಜ್ಯದಲ್ಲಿ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರ ಬದುಕಿನಲ್ಲಿ ಬಹಳಷ್ಟು ಬದಲಾವಣೆ ಉಂಟಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ ತಿಳಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಹಳೆ ಬಸ್ ನಿಲ್ದಾಣದಲ್ಲಿ ಮಂಗಳವಾರ ಗ್ಯಾರಂಟಿ ಯೋಜನೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಕಾರ್ಯಕ್ರಮದ ಪ್ರಚಾರ ಕಾರ್ಯಕ್ರಮದ ಕಲಾ ಜಾಥಾ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾರ್ಯ ಕೈಗೊಳ್ಳಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ ಕಲಾಜಾಥ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಪ್ರಚಾರ ವಾಹನವು ಫೆ. 7ರ ವರೆಗೆ ಜಿಲ್ಲೆಯಾದ್ಯಂತ ಪ್ರಚಾರ ಕೈಗೊಳ್ಳಲಿದೆ. ಬೀದರ್ ಜಿಲ್ಲೆಯ 20 ಗ್ರಾಮಗಳಿಗೆ ಈ ವಾಹನ ಸಂಚರಿಸಲಿದ್ದು, ವಾಹನದ ಜೊತೆಗೆ ವಾರ್ತಾ ಇಲಾಖೆಯಿಂದ ಆಯ್ಕೆ ಮಾಡಿರುವ ಕಲಾ ತಂಡಗಳು ಗ್ಯಾರಂಟಿ ಯೋಜನೆಗಳ ಕುರಿತು ನಾಟಕ ಪ್ರಸ್ತುತಪಡಿಸಲಿವೆ ಎಂದು ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಸುಳ್ಳೋಳಿ, ಸಿನಿ ಚಾಲಕ ವಿಜಯಕೃಷ್ಣ ಸೋಲಪುರ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.