ADVERTISEMENT

ಬೀದರ್‌: ಶಾಹೀನ್‍ಗೆ 10 ರೊಳಗೆ ಐದು ರ್‍ಯಾಂಕ್

ಸಾಮಾನ್ಯ ಪ್ರವೇಶ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2020, 13:59 IST
Last Updated 21 ಆಗಸ್ಟ್ 2020, 13:59 IST
ಕಾರ್ತಿಕ ರೆಡ್ಡಿ
ಕಾರ್ತಿಕ ರೆಡ್ಡಿ   

ಬೀದರ್: ಪ್ರಸಕ್ತ ಸಾಲಿನ ಸಿಇಟಿಯಲ್ಲಿ ಇಲ್ಲಿಯ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು 10 ರೊಳಗೆ ಐದು ರ್‍ಯಾಂಕ್ ಗಳಿಸಿ ಗಮನ ಸೆಳೆದಿದೆ.

ಕಾಲೇಜಿನ ಕಾರ್ತಿಕ ರೆಡ್ಡಿ ನೈಸರ್ಗಿಕ ಚಿಕಿತ್ಸಾ ವಿಜ್ಞಾನ ವಿಭಾಗದಲ್ಲಿ 4ನೇ ಮತ್ತು ಪಶು ವೈದ್ಯಕೀಯ ವಿಜ್ಞಾನ ವಿಭಾಗದಲ್ಲಿ 9ನೇ ರ್‍ಯಾಂಕ್ , ಎಂ.ಡಿ. ಅರ್ಬಾಜ್ ಅಹಮ್ಮದ್ ಪಶು ವೈದ್ಯಕೀಯ ವಿಜ್ಞಾನ ವಿಭಾಗದಲ್ಲಿ 6ನೇ, ಬಿ. ಫಾರ್ಮಾದಲ್ಲಿ 9ನೇ ಹಾಗೂ ನೈಸರ್ಗಿಕ ಚಿಕಿತ್ಸಾ ವಿಜ್ಞಾನ ವಿಭಾಗದಲ್ಲಿ 10ನೇ ರ್‍ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ.

ಶಾಹೀನ್ ಕಾಲೇಜು ಹಿಂದಿನಿಂದಲೂ ಸಿಇಟಿ ಹಾಗೂ ನೀಟ್‍ನಲ್ಲಿ ಗಮನ ಸೆಳೆಯುವ ಸಾಧನೆ ಮಾಡುತ್ತಲೇ ಬಂದಿದೆ. ಈ ಬಾರಿಯೂ ಕಾಲೇಜು ವಿದ್ಯಾರ್ಥಿಗಳು ಅಮೋಘ ಸಾಧನೆ ತೋರಿದ್ದಾರೆ ಎಂದು ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಸಂತಸ ವ್ಯಕ್ತಪಡಿಸಿದ್ದಾರೆ.

ADVERTISEMENT

ಕಾಲೇಜಿನಲ್ಲಿ ಪಿಯುಸಿ ಪ್ರಥಮ ವರ್ಷದಿಂದಲೇ ಸಿಇಟಿ ಹಾಗೂ ನೀಟ್ ತರಬೇತಿಗೆ ವಿಶೇಷ ಒತ್ತು ಕೊಡಲಾಗುತ್ತಿದೆ. ವೈದ್ಯ, ಎಂಜಿನಿಯರ್ ಸೇರಿದಂತೆ ವಿವಿಧ ವೃತ್ತಿಯ ವಿದ್ಯಾರ್ಥಿಗಳ ಕನಸು ನನಸಾಗಿಸಲು ಸರ್ವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕಳೆದ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ಕಾಲೇಜಿನ ವಿನೀತ್ ಮೆಗೂರ್ ಪಶು ವೈದ್ಯಕೀಯ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ್‍ಯಾಂಕ್ ಗಳಿಸಿ ಕಲ್ಯಾಣ ಕರ್ನಾಟಕದ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಿಸಿದ್ದರು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.