ADVERTISEMENT

ತೊಗರಿಗೆ ಕ್ವಿಂಟಲ್‍ಗೆ ₹ 7 ಸಾವಿರ ಬೆಲೆ ನಿಗದಿಪಡಿಸಿ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2020, 13:18 IST
Last Updated 27 ಡಿಸೆಂಬರ್ 2020, 13:18 IST
ಮಲ್ಲಿಕಾರ್ಜುನ ಸ್ವಾಮಿ
ಮಲ್ಲಿಕಾರ್ಜುನ ಸ್ವಾಮಿ   

ಬೀದರ್: ಪ್ರತಿ ಕ್ವಿಂಟಲ್ ತೊಗರಿಗೆ ₹ 7 ಸಾವಿರ ಬೆಲೆ ನಿಗದಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಕೇಂದ್ರ ಸರ್ಕಾರದ ₹ 6 ಸಾವಿರ ಕನಿಷ್ಠ ಬೆಂಬಲ ಬೆಲೆ ಜತೆಗೆ ರಾಜ್ಯ ಸರ್ಕಾರ ₹ 1 ಸಾವಿರ ಪ್ರೋತ್ಸಾಹ ಧನ ಕೊಡಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.

ಖರೀದಿ ಕೇಂದ್ರಗಳಲ್ಲಿ ತೊಗರಿ ನೋಂದಣಿ ಅವಧಿ ಮಾರ್ಚ್‍ವರೆಗೆ ವಿಸ್ತರಿಸಬೇಕು. ಅತಿವೃಷ್ಟಿಯಿಂದ ತೊಗರಿ ಬೆಳೆ ಹಾನಿಗೊಳಗಾದ ರೈತರಿಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

****
ಪುಷ್ಪ ಬೇಸಾಯ ತಾಂತ್ರಿಕತೆಗಳ ತರಬೇತಿ 28ಕ್ಕೆ

ಬೀದರ್‌: ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರ ಬೀದರದಲ್ಲಿ ಪುಷ್ಪ ಬೇಸಾಯ ತಾಂತ್ರಿಕತೆಗಳ ಕುರಿತು ಡಿಸೆಂಬರ್ 28 ರಿಂದ 30ರ ವರೆಗೆ ಬೆಳಿಗ್ಗೆ 10.30 ರಿಂದ ಸಂಜೆ 4.30ವರೆಗೆ ತರಬೇತಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಆಸಕ್ತ ರೈತರು ಡಾ.ನಿಂಗದಳ್ಳಿ ಮಲ್ಲಿಕಾರ್ಜುನ, ತೋಟಗಾರಿಕೆ ವಿಜ್ಞಾನಿ ರವರಿಗೆ 9980102727 ಮೊಬೈಲ್ ಸಂಖ್ಯೆಗೆ ಕರೆಮಾಡಿ ತಮ್ಮ ಹೆಸರನ್ನು ನೋಂದಾಯಿಸಬೇಕು. ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೃಷಿ ವಿಜ್ಞಾನ ಕೇಂದ್ರ ಬೀದರನ ಹಿರಿಯ ವಿಜ್ಞಾನಿ ಹಾಗು ಮುಖ್ಯಸ್ಥರಾದ ಡಾ.ಸುನಿಲಕುಮಾರ ಎನ್.ಎಮ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.