ADVERTISEMENT

ಬೀದರ್‌ನಿಂದ ವಿಮಾನ ಸೇವೆ: 2 ವಾರದಲ್ಲಿ ವರದಿ ಸಲ್ಲಿಸಲು ನಿರ್ದೇಶಿಸಿದ ಸಚಿವ ಪಾಟೀಲ

​ಪ್ರಜಾವಾಣಿ ವಾರ್ತೆ
Published 18 ಜುಲೈ 2024, 14:01 IST
Last Updated 18 ಜುಲೈ 2024, 14:01 IST
<div class="paragraphs"><p>ಬೀದರ್‌ನಲ್ಲಿ ಈಶ್ವರ ಖಂಡ್ರೆ ಮಾತನಾಡಿದರು. ರಹೀಂ ಖಾನ್ ಹಾಗೂ ಎಂ.ಬಿ. ಪಾಟೀಲ ಇದ್ದಾರೆ</p></div>

ಬೀದರ್‌ನಲ್ಲಿ ಈಶ್ವರ ಖಂಡ್ರೆ ಮಾತನಾಡಿದರು. ರಹೀಂ ಖಾನ್ ಹಾಗೂ ಎಂ.ಬಿ. ಪಾಟೀಲ ಇದ್ದಾರೆ

   

ಪ್ರಜಾವಾಣಿ ಚಿತ್ರ

ಬೀದರ್‌: ‘ಬೀದರ್‌–ಬೆಂಗಳೂರು ನಡುವೆ ನಾಗರಿಕ ವಿಮಾನಯಾನ ಸೇವೆ ಪುನಃ ಆರಂಭಿಸುವುದರ ಬಗ್ಗೆ ವಿವಿಧ ವಿಮಾನಯಾನ ಕಂಪನಿಗಳೊಂದಿಗೆ ಚರ್ಚಿಸಿ, ಎರಡು ವಾರಗಳ ಒಳಗೆ ವರದಿ ಸಲ್ಲಿಸಬೇಕು’ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ADVERTISEMENT

ಬೆಂಗಳೂರಿನ ವಿಧಾನಸೌಧದಲ್ಲಿ ಗುರುವಾರ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್‌ ಅವರೊಂದಿಗೆ ಸೇರಿಕೊಂಡು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಮೇಲಿನಂತೆ ಸೂಚನೆ ಕೊಟ್ಟರು.

72 ಆಸನಗಳನ್ನು ಒಳಗೊಂಡಿರುವ ವಿಮಾನ ಸೇವೆ ಆರಂಭಿಸುವುದರ ಬಗ್ಗೆ ಬೇರೆ ಬೇರೆ ಕಂಪನಿಗಳ ಜೊತೆಯಲ್ಲಿ ಮಾತುಕತೆ ನಡೆಸಿ, ವರದಿ ಕೊಡಬೇಕೆಂದು ಸೂಚಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಸಚಿವ ಈಶ್ವರ ಬಿ. ಖಂಡ್ರೆ, ಹಿಂದುಳಿದ ಕಲ್ಯಾಣ ಕರ್ನಾಟಕಕ್ಕೆ ಸೇರಿದ ಗಡಿ ಜಿಲ್ಲೆ ಬೀದರ್‌ಗೆ ವಿಮಾನಯಾನ ಸೇವೆ ಕಲ್ಪಿಸಬೇಕು ಎಂಬ ಜನರ ಹೋರಾಟಕ್ಕೆ ಮಣಿದು 2020ರಲ್ಲಿ ಭಾರತೀಯ ವಾಯುಪಡೆಗೆ ಸೇರಿದ ಏರ್‌ಫೋರ್ಸ್‌ನಲ್ಲಿ ನಾಗರಿಕ ವಿಮಾನಯಾನ ಸೇವೆ ಆರಂಭಿಸಲಾಗಿತ್ತು. ಸ್ಥಗಿತಗೊಂಡಿದ್ದ ವಿಮಾನಯಾನ ಮತ್ತೆ 2022ರಲ್ಲಿ ಪುನಃ ಆರಂಭಿಸಲಾಗಿತ್ತು. ಕಳೆದ ಡಿಸೆಂಬರ್ ನಿಂದ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಗಮನ ಸೆಳೆದರು.

ಉಡಾನ್ ಸಬ್ಸಿಡಿ ನಿಲ್ಲಿಸಿರುವ ಕಾರಣ ವಿಮಾನ ಸೇವೆ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಸೇವಾ ಪೂರೈಕೆದಾರ ಸಂಸ್ಥೆಗಳು ತಿಳಿಸಿವೆ. ರಾಜ್ಯ ಸರ್ಕಾರದಿಂದಲೇ ಸಬ್ಸಿಡಿ ಹಣ ಭರಿಸುವ ಕುರಿತು ವಿಮಾನಯಾನ ಸೇವಾ ಪೂರೈಕೆದಾರರೊಂದಿಗೆ ಮಾತುಕತೆ ನಡೆಸಿ, ಜಿಲ್ಲೆಯ ಜನರಿಗೆ ಅಗ್ಗದ ದರದಲ್ಲಿ ನಾಗರಿಕ ವಿಮಾನಯಾನ ಸೇವೆ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.