ADVERTISEMENT

ಭಾರಿ ಮಳೆಗೆ ತುಂಬಿ ಹರಿದ ಸೇತುವೆ: ಪರದಾಡಿದ ವಾಹನ ಸವಾರರು

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2025, 4:38 IST
Last Updated 13 ಸೆಪ್ಟೆಂಬರ್ 2025, 4:38 IST
ಹುಲಸೂರ ತಾಲ್ಲೂಕಿನ ಬೇಲೂರ ಗ್ರಾಮದ ಬಳಿ ಶುಕ್ರವಾರ ಮಧ್ಯಾಹ್ನ ಸುರಿದ ಭಾರಿ ಮಳೆಯಿಂದಾಗಿ ಹುಲಸೂರ - ಬಸವಕಲ್ಯಾಣ ಸಂಪರ್ಕ ಕಡಿತಗೊಂಡು ಸಂಚಾರ ಸ್ಥಗಿತಗೊಂಡಿತು
ಹುಲಸೂರ ತಾಲ್ಲೂಕಿನ ಬೇಲೂರ ಗ್ರಾಮದ ಬಳಿ ಶುಕ್ರವಾರ ಮಧ್ಯಾಹ್ನ ಸುರಿದ ಭಾರಿ ಮಳೆಯಿಂದಾಗಿ ಹುಲಸೂರ - ಬಸವಕಲ್ಯಾಣ ಸಂಪರ್ಕ ಕಡಿತಗೊಂಡು ಸಂಚಾರ ಸ್ಥಗಿತಗೊಂಡಿತು   

ಹುಲಸೂರ: ತಾಲ್ಲೂಕಿನಲ್ಲಿ ಶುಕ್ರವಾರ ಮಧ್ಯಾಹ್ನ ಸುರಿದ ಭಾರಿ ಮಳೆಗೆ ಬೇಲೂರ ಗ್ರಾಮದ ಬಳಿ ಇರುವ ಸೇತುವೆ ಮೇಲಿಂದ ನೀರು ಹರಿದ ಪರಿಣಾಮ ಕೆಲ ಕಾಲ ವಾಹನ ಸವಾರರು ಪರದಾಡುವಂತಾಯಿತು. ಇದರಿಂದಾಗಿ ಹುಲಸೂರ - ಬಸವಕಲ್ಯಾಣ ಸಂಪರ್ಕ ಕಡಿತಗೊಂಡು ಸಂಚಾರ ಸ್ಥಗಿತಗೊಂಡಿತು.

ಅಳವಾಯಿ, ತುಗಾಂವ (ಎಚ್), ಮಿರಕಲ, ವಾಂಝರಖೇಡ್ ಸೇರಿದಂತೆ ಇತರೆಡೆ ಸಾಧಾರಣ ಮಳೆ ಸುರಿದರೆ ಗೋರಟಾ, ಬೇಲೂರ, ಮುಚಳoಬ ಗ್ರಾಮದಲ್ಲಿ ಅರ್ಧ ತಾಸು ಭಾರಿ ಮಳೆ ಸುರಿದಿದೆ.

ತಾಲ್ಲೂಕಿನಲ್ಲಿ ಸ್ವಲ್ಪ ಮಳೆ ಬಂದರೂ ಸಾಕು ಸೇತುವೆಗಳು ಮುಳುಗಡೆಯಾಗುತ್ತಿದ್ದು, ಹಲವೆಡೆ ಸೇತುವೆಗಳ ಗಾತ್ರ ಹೆಚ್ಚಳವಾಗಬೇಕಿದೆ. ಮಳೆಯಿಂದಾಗಿ ತೊಗರಿ ಬೆಳೆಯಲ್ಲಿ ನೀರು ನಿಂತು ಬೆಳೆ ಹಾನಿಯಾದರೆ ಇನ್ನೊಂದೆಡೆ ಸೋಯಾ ಬೆಳೆ ಕಟಾವಿಗೆ ಬಂದಿದ್ದು ಮಳೆಯಿಂದಾಗಿ ಹೆಚ್ಚಿನ ಬೆಳೆ ಹಾನಿ ಸಂಭವಿಸಲಿದೆ. ಕೂಡಲೇ ಸರ್ಕಾರ ಅತಿವೃಷ್ಟಿ ಘೋಷಣೆ ಮಾಡಿ ಪರಿಹಾರ ನೀಡಬೇಕು’ ಎಂದು ರೈತರು ಆಗ್ರಹಿಸಿದ್ದಾರೆ.

ADVERTISEMENT

ಇಲ್ಲಿಯವರೆಗೆ ಬಿದ್ದ ಮಳೆಯಿಂದ ಗ್ರಾಮೀಣ ಭಾಗದಲ್ಲಿ ಯವುದೇ ಜೀವ ಹಾನಿಯಾಗಿಲ್ಲವೆಂದು ತಹಶೀಲ್ದಾರ್ ಶಿವಾನಂದ ಮೇತ್ರೆ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.