ADVERTISEMENT

ಜಾನಪದ ಕಲೆಗೆ ಪ್ರೋತ್ಸಾಹ ಅಗತ್ಯ: ಸಿದ್ರಾಮ ಕನೇರಿ

​ಪ್ರಜಾವಾಣಿ ವಾರ್ತೆ
Published 18 ಮೇ 2022, 4:31 IST
Last Updated 18 ಮೇ 2022, 4:31 IST
ಔರಾದ್ ತಾಲ್ಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ನಡೆದ ಜಾನಪದ ಉತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಗಣ್ಯರು ಪಾಲ್ಗೊಂಡಿದ್ದರು
ಔರಾದ್ ತಾಲ್ಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ನಡೆದ ಜಾನಪದ ಉತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಗಣ್ಯರು ಪಾಲ್ಗೊಂಡಿದ್ದರು   

ಔರಾದ್: ‘ಜಿಲ್ಲೆಯ ಗಡಿ ಭಾಗದ ಜಾನಪದ ಕಲೆ ಹಾಗೂ ಕಲಾವಿದರಿಗೆ ಸೂಕ್ತ ಪ್ರೋತ್ಸಾಹ ಸಿಗಬೇಕು’ ಎಂದು ಭವಾನಿ ವಿವಿಧೋದ್ದೇಶ ಸಂಘದ ಕಾರ್ಯದರ್ಶಿ ಸಿದ್ರಾಮ ಕನೇರಿ ಹೇಳಿದರು.

ದೇಶದ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ತಾಲ್ಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ಈಚೆಗೆ ನಡೆದ ಗಡಿನಾಡು ಜಾನಪದ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಜಿಲ್ಲೆಯ ಗಡಿ ಭಾಗದಲ್ಲಿ ವೈವಿಧ್ಯಮಯ ಜಾನಪದ ಕಲೆಗಳಿವೆ. ಇವುಗಳು ಅತ್ಯಂತ ಮೌಲ್ಯಯುತವಾದ ಕಲೆಗಳು. ಇವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಾಗಿದೆ’ ಎಂದರು.

ADVERTISEMENT

ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಜು ಜೈರಾಮ, ಹಣಮಂತ ಸಿಂಧೆ, ಲಲಿತಾ, ಕಮಲಮ್ಮ, ಬಾನುದಾಸರೆಡ್ಡಿ ಹಾಗೂ ರಾಮಪ್ಪ ಹುಸೇನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.