ADVERTISEMENT

ಜನಪರ ಉತ್ಸವ ಇಂದು

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 15:45 IST
Last Updated 7 ಡಿಸೆಂಬರ್ 2021, 15:45 IST

ಬೀದರ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2021-22ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಇಲ್ಲಿಯ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಬುಧವಾರ (ಡಿ.8) ಜನಪರ ಉತ್ಸವ ಹಮ್ಮಿಕೊಂಡಿದೆ.

ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಉತ್ಸವ ಉದ್ಘಾಟಿಸುವರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಬುರ್ಗಿಯ ಜಂಟಿ ನಿರ್ದೇಶಕ ಕೆ.ಎಚ್.ಚನ್ನೂರ, ನ್ಯೂ ಟೌನ್ ಠಾಣೆಯ ಸಿಪಿಐ ಕಪಿಲ್‍ದೇವ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಯೋಗೇಶ ಬಿ.ವಿ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಸವರಾಜ ಬಡಿಗೇರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ ಹಾಗೂ ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಜಿ.ನಾಡಗೀರ ಪಾಲ್ಗೊಳ್ಳುವರು.

ADVERTISEMENT

ಜಿಲ್ಲೆ, ನೆರೆ ಜಿಲ್ಲೆಗಳ ಕಲಾ ತಂಡಗಳು ಹಾಗೂ ಕಲಾವಿದರು ಉತ್ಸವದಲ್ಲಿ ತಮ್ಮ ಕಲೆಗಳ ಪ್ರದರ್ಶನ ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.