ADVERTISEMENT

ಸರ್ವಜ್ಞ ತತ್ವ ಆದರ್ಶ ಪಾಲಿಸಿ: ಸಚಿವ ರಹೀಂಖಾನ್

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2026, 5:22 IST
Last Updated 21 ಫೆಬ್ರುವರಿ 2026, 5:22 IST
ಬೀದರ್ ನಗರದಲ್ಲಿ ಆಯೋಜಿಸಿದ್ದ ಸರ್ವಜ್ಞ ಜಯಂತಿ ಕಾರ್ಯಕ್ರಮಕ್ಕೆ ಸಚಿವ ರಹೀಂಖಾನ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು
ಬೀದರ್ ನಗರದಲ್ಲಿ ಆಯೋಜಿಸಿದ್ದ ಸರ್ವಜ್ಞ ಜಯಂತಿ ಕಾರ್ಯಕ್ರಮಕ್ಕೆ ಸಚಿವ ರಹೀಂಖಾನ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು   

ಬೀದರ್: ‘ಸರ್ವಜ್ಞ ತತ್ವ ಆದರ್ಶಗಳು ಪ್ರತಿಯೊಬ್ಬರೂ ಪಾಲಿಸಬೇಕು’ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರ ಸಂಯುಕ್ತಾಶ್ರಯದಲ್ಲಿ ನಗರದ ಪೂಜ್ಯ ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ಆಯೋಜಿಸಿದ ಸರ್ವಜ್ಞ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಮಾಜದಲ್ಲಿ ಇಂದಿಗೂ ಬೇರೂರಿರುವ ಜಾತಿ-ಧರ್ಮ, ಮೇಲು-ಕೀಳು, ಬಡವ-ಶ್ರೀಮಂತ ಎಂಬ ತಾರತಮ್ಯ ಹೋಗಲಾಡಿಸಲು ಸರ್ವಜ್ಞ ಸೇರಿದಂತೆ ಅನೇಕ ಮಹಾತ್ಮರ ಮಾನವೀಯ ಮೌಲ್ಯಗಳು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.

ADVERTISEMENT

‌ಯುವ ಸಾಹಿತಿ ಈಶ್ವರ ರುಮ್ಮಾ ಅವರು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮಕ್ಕೂ ಮುಂಚೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂತಕವಿ ಸರ್ವಜ್ಞ ಅವರ ಭಾವಚಿತ್ರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಪೂಜೆ ಸಲ್ಲಿಸಿದರು.

ಬಳಿಕ ಸಂತಕವಿ ಸರ್ವಜ್ಞರ ಭಾವಚಿತ್ರ ಮೆರವಣಿಗೆ ನಗರದ ಶಿವಾಜಿ ವೃತ್ತದಿಂದ ಚಾಲನೆಗೊಂಡು ಭಗತ್ ಸಿಂಗ್ ವೃತ್ತ, ಬಸವವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ರೋಟರಿ ವೃತ್ತ ಮಾರ್ಗವಾಗಿ ಪೂಜ್ಯ ಡಾ. ಚನ್ನಬಸವ ಪಟ್ಟದೇವರ ರಂಗಮಂದಿರಕ್ಕೆ ತಲುಪಿತು.

ಈ ಸಂದರ್ಭದಲ್ಲಿ ಬೀದರ್ ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ಜಿಲ್ಲಾ ಕುಂಬಾರ ಸಮಾಜದ ಮುಖಂಡ ವಿಠಲ ಕುಂಬಾರ , ನಾಗರಾಜ ಕರ್ಪೂರ್, ಶಿವಾನಂದ ಕುಂಬಾರ, ಮಲ್ಲಿಕಾರ್ಜುನ ಕುಂಬಾರ, ರಾಜಕುಮಾರ ಕುಂಬಾರ, ಬಾಲಾಜಿ ಕುಂಬಾರ, ಕಾಶಿನಾಥ್ ಕುಂಬಾರ, ಶ್ರೀಕಾಂತ್ ಕುಂಬಾರ, ಪವನ್ ಕುಂಬಾರ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.