ಬೀದರ್: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯ ಟಿಎ, ಟಿಎಂಐಎಸ್ ಹಾಗೂ ಡಿಇಒ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಪಡಿಸಬೇಕು ಎಂದು ಜಾತ್ಯತೀತ ಜನತಾ ದಳದ ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಭಿ ಕಾಳೆ ಒತ್ತಾಯಿಸಿದ್ದಾರೆ.
ಹುದ್ದೆಗಳ ಆಯ್ಕೆಯಲ್ಲಿ ಮೀಸಲಾತಿ ಪಾಲನೆಯಾಗಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಇನ್ನೊಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಬರೆದ ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.