ADVERTISEMENT

ರೈಲು ಮಾರ್ಗ ಕಾಮಗಾರಿ ಆರಂಭಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2021, 16:04 IST
Last Updated 3 ಫೆಬ್ರುವರಿ 2021, 16:04 IST
ಬೀದರ್ ಸಂಸದ ಭಗವಂತ ಖೂಬಾ ಅವರು ರೈಲ್ವೆ ಮಂಡಳಿ ನೂತನ ಅಧ್ಯಕ್ಷ ಸುನೀತ್ ಶರ್ಮಾ ಅವರಿಗೆ ಪುಷ್ಪಗುಚ್ಛ ನೀಡಿ ಶುಭ ಕೋರಿದರು
ಬೀದರ್ ಸಂಸದ ಭಗವಂತ ಖೂಬಾ ಅವರು ರೈಲ್ವೆ ಮಂಡಳಿ ನೂತನ ಅಧ್ಯಕ್ಷ ಸುನೀತ್ ಶರ್ಮಾ ಅವರಿಗೆ ಪುಷ್ಪಗುಚ್ಛ ನೀಡಿ ಶುಭ ಕೋರಿದರು   

ಬೀದರ್: ಬೀದರ್- ನಾಂದೇಡ ರೈಲು ಮಾರ್ಗ ಕಾಮಗಾರಿ ಶೀಘ್ರ ಆರಂಭಿಸಬೇಕು ಎಂದು ಸಂಸದ ಭಗವಂತ ಖೂಬಾ ಒತ್ತಾಯಿಸಿದ್ದಾರೆ.

ರೈಲ್ವೆ ಮಂಡಳಿ ನೂತನ ಅಧ್ಯಕ್ಷ ಸುನೀತ್ ಶರ್ಮಾ ಅವರನ್ನು ಭೇಟಿ ಮಾಡಿ ಈ ಕುರಿತು ಬೇಡಿಕೆ ಮಂಡಿಸಿದ್ದಾರೆ.

ಬೀದರ್ ಲೋಕಸಭಾ ಕ್ಷೇತ್ರದ ರೈಲು ಮಾರ್ಗಗಳ ವಿದ್ಯುದ್ದೀಕರಣ, ಹೊಸ ರೈಲುಗಳ ಆರಂಭ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿ ಕುರಿತು ಶರ್ಮಾ ಅವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಖೂಬಾ ತಿಳಿಸಿದ್ದಾರೆ.

ADVERTISEMENT

ಈಗಾಗಲೇ ರೈಲ್ವೆಗೆ ಸಂಬಂಧಿಸಿದಂತೆ ಕ್ಷೇತ್ರವು ಹಲವು ಮೈಲಿಗಲ್ಲುಗಳನ್ನು ಸಾಧಿಸಿದ್ದು, ಜನರಿಗೆ ಇನ್ನೂ ಹೆಚ್ಚಿನ ಸೌಕರ್ಯ ಒದಗಿಸಲು ಸಹಕರಿಸುವಂತೆ ಕೋರಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.