ರಾಯಚೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲೇ ಅಧಿಕಾರಿಯೊಬ್ಬರು ಮೊಬೈಲ್‌ನಲ್ಲಿ ರಮ್ಮಿ ಆಡಿದರು
ಬೀದರ್: ‘ರಾಯಚೂರಿನಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ರಮ್ಮಿ ಆಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಕಾರಣ ಕೇಳಿ ನೋಟಿಸ್ ನೀಡಲು ಸೂಚನೆ ನೀಡಲಾಗಿದೆ’ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ರಾಯಚೂರಿನಲ್ಲಿ ಶುಕ್ರವಾರ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ರಾಯಚೂರಿನ ಪ್ರಾದೇಶಿಕ ಅರಣ್ಯ ಇಲಾಖೆಯ ಡಿಸಿಎಫ್ ಪ್ರವೀಣ ಅವರು ಬಹಳ ಹೊತ್ತಿನವರೆಗೂ ಮೊಬೈಲ್‌ನಲ್ಲಿ ‘ರಮ್ಮಿ’ ಆಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.
ಅಧಿಕಾರಿ ‘ರಮ್ಮಿ’ ಆಡಿದ್ದ ವಿಷಯ ಸಚಿವರ ಗಮನಕ್ಕೆ ಬರುತ್ತಿದ್ದಂತೆಯೇ, ಅಧಿಕಾರಿಯನ್ನು ಸಭೆಯಿಂದ ಹೊರಗೆ ಕಳುಹಿಸಿದರು. ಡಿಸಿಎಫ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.