ADVERTISEMENT

ಡಿಕೆಶಿ‌ ಭೇಟಿ ಮಾಡಿದ ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ: ಚರ್ಚೆಗೆ ಗ್ರಾಸ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2022, 2:52 IST
Last Updated 25 ಆಗಸ್ಟ್ 2022, 2:52 IST
ಬಸವಕಲ್ಯಾಣದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಬೆಂಗಳೂರಿನಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ್ ‌ಅವರನ್ನು ಭೇಟಿ ಮಾಡಿದರು
ಬಸವಕಲ್ಯಾಣದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಬೆಂಗಳೂರಿನಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ್ ‌ಅವರನ್ನು ಭೇಟಿ ಮಾಡಿದರು   

ಬಸವಕಲ್ಯಾಣ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಕಾರಣ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಬುಧವಾರ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವ ಕುರಿತು ಇಲ್ಲಿ ಚರ್ಚೆ ನಡೆಯುತ್ತಿದೆ.

ಉಪ ಚುನಾವಣೆಯಲ್ಲಿ ಬಿಜೆಪಿಯ ಪ್ರಬಲ ಆಕಾಂಕ್ಷಿ ಆಗಿದ್ದ ಮತ್ತು ಕೊನೆ ಗಳಿಗೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಖೂಬಾ ಅವರು, ನಂತರದಲ್ಲಿ ಯಾವುದೇ ಪಕ್ಷದ ಜತೆ ಗುರುತಿಸಿಕೊಂಡಿಲ್ಲ. ಆದರೆ ಈಚೆಗೆ ಕ್ಷೇತ್ರದಲ್ಲಿ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದು ಮುಂಬರುವ ಚುನಾವಣೆಯಲ್ಲಿ ಇವರು ಮತ್ತೆ ಸ್ಪರ್ಧಿಸುವರು ಎಂಬ ಮಾತುಗಳು ಅವರ ಆಪ್ತ ವಲಯದಲ್ಲಿ ಕೇಳಿ ಬರುತ್ತಿವೆ. ಇದರ ಬೆನ್ನಲ್ಲೇ ಅವರು ಡಿ.ಕೆ‌.ಶಿವಕುಮಾರ ಅವರನ್ನು ಭೇಟಿ ಆಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅವರೊಂದಿಗೆ ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಲಭ್ಯ ಆಗಲಿಲ್ಲ. ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ. ಕಾಂಗ್ರೆಸ್ ಸೇರುವ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಸೌಹಾರ್ದಯುತ ಭೇಟಿ ಇದಾಗಿತ್ತು ಎಂದು ಬೆಂಗಳೂ ರಿನಲ್ಲಿ ಅವರೊಂದಿಗಿದ್ದ ಆಪ್ತರೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT