ಖಾಜಿ ಅರ್ಷದ್ ಅಲಿ
ಬೀದರ್: ವಿಧಾನ ಪರಿಷತ್ ಮಾಜಿ ಸದಸ್ಯ ಖಾಜಿ ಅರ್ಷದ್ ಅಲಿ (75) ಅವರು ನಗರದಲ್ಲಿ ಸೋಮವಾರ ಹೃದಯಾಘಾತದಿಂದ ನಿಧನರಾದರು.
ಮೃತರಿಗೆ ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರು ಇದ್ದಾರೆ. ಮಂಗಳವಾರ (ಮಾರ್ಚ್ 4) ಮಧ್ಯಾಹ್ನ 1.30ಕ್ಕೆ ನಗರದ ಜಾಮೀಯಾ ಮಸೀದಿಯಲ್ಲಿ ಗೌರವ ಸಲ್ಲಿಸಿ, ಬಳಿಕ ಭಾಲ್ಕಿಯ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಎರಡು ಅವಧಿಗೆ ವಿಧಾನ ಪರಿಷತ್ ಸದಸ್ಯ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಉರ್ದು ಹಾಗೂ ಹಿಂದಿ ಭಾಷೆಯ ಎರಡು ಪತ್ರಿಕೆಗಳ ಮಾಲೀಕರಾಗಿದ್ದರು. ಈ ಹಿಂದೆ ‘ಪ್ರಜಾವಾಣಿ’ಗೆ ಹಲವು ಲೇಖನಗಳನ್ನು ಬರೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.