ADVERTISEMENT

ಗೌರವದೊಂದಿಗೆ ಮಾಜಿ ಎಂಎಲ್‌ಸಿ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2025, 12:36 IST
Last Updated 4 ಮಾರ್ಚ್ 2025, 12:36 IST
   

ಬೀದರ್: ವಿಧಾನ ಪರಿಷತ್ ಮಾಜಿ ಮಾಜಿ ಸದಸ್ಯ ಕಾಜಿ ಅರ್ಷದ್‌ ಅಲಿ (75) ಅವರ ಅಂತ್ಯಕ್ರಿಯೆ ಸಕಲ ಪೊಲೀಸ್ ಗೌರವಗಳೊಂದಿಗೆ ಭಾಲ್ಕಿಯಲ್ಲಿ ಮಂಗಳವಾರ ಮಧ್ಯಾಹ್ನ ನಡೆಯಿತು.

ಭಾಲ್ಕಿಯ ಅವರ ಜಮೀನಿನಲ್ಲಿ ಪ್ರಾರ್ಥನೆ ಬಳಿಕ ಧಾರ್ಮಿಕ ವಿಧಿ, ವಿಧಾನಗನ್ನು ನೆರವೇರಿಸಿ ಅಂತ್ಯಕ್ರಿಯೆ ಮಾಡಲಾಯಿತು. ಇದಕ್ಕೂ ಮುನ್ನ ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಮರ್ಪಿಸಿದರು.

ಸಂಸದ ಸಾಗರ್ ಖಂಡ್ರೆ, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಅಂತಿಮ ದರ್ಶನ ಪಡೆದು, ಗೌರವ ಸಲ್ಲಿಸಿದರು. 

ADVERTISEMENT

ಬೀದರ್‌ನ ನೂರ್‌ಖಾನ್ ತಾಲೀಂನಲ್ಲಿರುವ ಅರ್ಷದ್‌ ಅಲಿ ಅವರ ನಿವಾಸದಿಂದ ಜಾಮಾ ಮಸೀದಿ ವರೆಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಜಾಮಾ ಮಸೀದಿಯಲ್ಲಿ ಅಂತ್ಯಕ್ರಿಯೆಯ ಪ್ರಾರ್ಥನೆ ಜರುಗಿತು. ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ, ಬಿಜೆಪಿ ಮುಖಂಡ ಬಾಬುವಾಲಿ, ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ, ಕಾಂಗ್ರೆಸ್‌ ಮುಖಂಡರಾದ ನರಸಿಂಗರಾವ್ ಸೂರ್ಯವಂಶಿ, ವಿಜಯಸಿಂಗ್, ಅರವಿಂದಕುಮಾರ ಅರಳಿ, ಕೆ. ಪುಂಡಲೀಕರಾವ್, ಆನಂದ ದೇವಪ್ಪ, ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ, ಉದ್ಯಮಿಗಳಾದ ಬಿ.ಜಿ. ಶೆಟಕಾರ್, ರಮೇಶ ಗೋಯಲ್ ಮತ್ತಿತರರು ಭೇಟಿ ಕೊಟ್ಟು ದರ್ಶನ ಪಡೆದರು. ಬಳಿಕ ಭಾಲ್ಕಿಗೆ ಪಾರ್ಥೀವ ಶರೀರ ಕೊಂಡೊಯ್ಯಲಾಯಿತು. ಸೋಮವಾರ ಸಂಜೆ ನಗರದಲ್ಲಿ ಹೃದಯಾಘಾತದಿಂದ ಅರ್ಷದ್‌ ಅಲಿ ಕೊನೆಯುಸಿರೆಳೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.