ಚಿಟಗುಪ್ಪ: ತಾಲ್ಲೂಕಿನ ಉಡಬಾಳ ಗ್ರಾಮದಲ್ಲಿ ಕೃಷಿ ಸಾಲ ಬಾಧೆಗೆ ಬೇಸತ್ತ ರೈತ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಸುಕಿನಲ್ಲಿ ಸಂಭವಿಸಿದೆ.
ಗ್ರಾಮದ ಮಾರುತಿ ಮಡೆಪ್ಪ ಪರೀಟ್ (53) ಮೃತ ರೈತ. ಅವರಿಗೆ ಐದು ಜನ ಹೆಣ್ಣುಮಕ್ಕಳಿದ್ದು, ನಾಲ್ವರಿಗೆ ಮದುವೆ ಮಾಡಿದ್ದಾರೆ. ಎರಡು ಎಕರೆ ಭೂಮಿ ಹೊಂದಿರುವ ಮಾರುತಿ ಅವರು, ಮುಸ್ತರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಾಲ ಪಡೆದಿದ್ದರು. ಖಾಸಗಿ ಸಾಲವೂ ಮಾಡಿದ್ದರಿಂದ ಬೇಸತ್ತು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.