ADVERTISEMENT

ಪಶು ವಿಶ್ವವಿದ್ಯಾಲಯದ ಸಂಸ್ಥಾಪನೆ ದಿನಾಚರಣೆ ಜ.17ಕ್ಕೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2023, 8:23 IST
Last Updated 15 ಜನವರಿ 2023, 8:23 IST
ಬೀದರ್‌ನಲ್ಲಿರುವ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ
ಬೀದರ್‌ನಲ್ಲಿರುವ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ   

ಬೀದರ್: ಕರ್ನಾಟಪಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 18ನೇ ಸಂಸ್ಥಪನಾ ದಿನಾಚರಣೆ ಕಾರ್ಯಕ್ರಮ ಜನವರಿ 17ರಂದು ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ.

ಪಶು ಸಂಗೋಪನೆ ಸಚಿವ ಪ್ರಭು ಚವಾಣ್‌ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಭಾರತೀಯ ಪಶು ವೈದ್ಯಕೀಯ ಪರಿಷತ್ತಿನ ಅಧ್ಯಕ್ಷ ಡಾ.ಉಮೇಶಚಂದ್ರ ಶರ್ಮಾ, ಕಾರ್ಯದರ್ಶಿ ಡಾ.ವಿನೋದ ಭಟ್, ಕುಲಪತಿ ಪ್ರೊ.ಕೆ.ಸಿ.ವೀರಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿ ಸದಸ್ಯರಾದ ಕವಿತಾ ಮಿಶ್ರಾ, ದೀಪಕ ದೊಡ್ಡಯ್ಯ, ಡಾ.ಯತಿರಾಜ್ ಎಸ್., ಡಾ.ಎನ್‌.ಎಂ.ದಿನೇಶ, ಭೋಜ್ಯಾನಾಯ್ಕ, ವಸಂತ ಬಿರಾದಾರ, ಕರ್ನಾಟಕ ಪಶು ವೈದ್ಯಕೀಯ ಪರಿಷತ್ತಿನ ಅಧ್ಯಕ್ಷ ಡಾ.ಕೆ. ಸತ್ಯನಾರಾಯಣ, ಪಶು ಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯ ನಿರ್ದೇಶಕ ಡಾ.ಮಂಜುನಾಥ ಪಾಳೇಗಾರ, ಕುಲಸಚಿವ ಸಿವಸಂಕರ್ ಎಸ್ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಆಯೋಜನಾ ಸಮಿತಿ ಅಧ್ಯಕ್ಷ ಡಾ.ಎನ್‌.ಎ.ಪಾಟೀಲ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.