ಅಪಘಾತ (ಪ್ರಾತಿನಿಧಿಕ ಚಿತ್ರ)
ಬೀದರ್: ಭಾಲ್ಕಿ ತಾಲ್ಲೂಕಿನ ಸೇವಾ ನಗರ ತಾಂಡಾ ಸಮೀಪ ರಾಷ್ಟ್ರೀಯ ಹೆದ್ದಾರಿ–50ರಲ್ಲಿ ಬುಧವಾರ ನಸುಕಿನ ಜಾವ ಲಾರಿ ಹಾಗೂ ಪಿಕ್ ಅಪ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ಉದಗೀರ್‌ನ ದಸ್ತಗೀರ್ ದವಳಸಾಬ್, ರಶೀದಾ ಮೊಹಮ್ಮದ್ ಶೇಕ್, ಅಮಾಹಮ್ ಶೇಕ್ ಹಾಗೂ ಹೈದರಾಬಾದ್‌ನ ಪಿಕ್ ಅಪ್ ವಾಹನ ಚಾಲಕ ವಲಿ ಮೃತರು. ಹತ್ತು ಜನ ಗಾಯಗೊಂಡಿದ್ದು, ಬ್ರಿಮ್ಸ್‌ಗೆ ದಾಖಲಿಸಲಾಗಿದೆ.
‘ಪಿಕ್ ಅಪ್ ವಾಹನವು ಉದಗೀರ್‌ನಿಂದ ಹೈದರಾಬಾದ್‌ಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಕಬ್ಬಿನ ಲಾರಿ ಡಿಕ್ಕಿ ಹೊಡೆದಿದೆ. ಎಲ್ಲರೂ ಹೈದರಾಬಾದಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಸಂಬಂಧಿಕರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಹಿಂತಿರುಗುವಾಗ ಈ ಘಟನೆ ನಡೆದಿದೆ. ಲಾರಿ ಚಾಲಕನ ಅತಿ ವೇಗದ ಚಾಲನೆಯೇ ಘಟನೆಗೆ ಕಾರಣ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.