ADVERTISEMENT

ನಾಲ್ಕು ಸಾವಿರ ಜನ ಕಾಂಗ್ರೆಸ್‍ಗೆ: ಖೇಣಿ

ಜೆಡಿಎಸ್ ತೊರೆದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 15:28 IST
Last Updated 1 ಅಕ್ಟೋಬರ್ 2021, 15:28 IST
ಜೆಡಿಎಸ್ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಜೋಸೆಫ್ ಕೊಡ್ಡಿಕರ್ ಅವರನ್ನು ಮಾಜಿ ಶಾಸಕ ಅಶೋಕ ಖೇಣಿ ಅಯಾಸಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜ ನೀಡಿ ಬರ ಮಾಡಿಕೊಂಡರು. ರಾಜಕುಮಾರ ಪಾಟೀಲ, ಚಂದ್ರಶೇಖರ ಚನಶೆಟ್ಟಿ, ಮೀನಾಕ್ಷಿ ಸಂಗ್ರಾಮ, ಇಮ್ಯಾನುವೆಲ್ ಇದ್ದರು
ಜೆಡಿಎಸ್ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಜೋಸೆಫ್ ಕೊಡ್ಡಿಕರ್ ಅವರನ್ನು ಮಾಜಿ ಶಾಸಕ ಅಶೋಕ ಖೇಣಿ ಅಯಾಸಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜ ನೀಡಿ ಬರ ಮಾಡಿಕೊಂಡರು. ರಾಜಕುಮಾರ ಪಾಟೀಲ, ಚಂದ್ರಶೇಖರ ಚನಶೆಟ್ಟಿ, ಮೀನಾಕ್ಷಿ ಸಂಗ್ರಾಮ, ಇಮ್ಯಾನುವೆಲ್ ಇದ್ದರು   

ಜನವಾಡ: ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ತಮ್ಮ ಸಂಪರ್ಕದಲ್ಲಿ ಇದ್ದಾರೆ. ಬರುವ ದಿನಗಳಲ್ಲಿ ನಾಲ್ಕು ಸಾವಿರ ಮಂದಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಲಿದ್ದಾರೆ ಎಂದು ಮಾಜಿ ಶಾಸಕ ಅಶೋಕ ಖೇಣಿ ಹೇಳಿದರು.

ಬೀದರ್ ತಾಲ್ಲೂಕಿನ ಅಯಾಸಪುರದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಜೋಸೆಫ್ ಕೊಡ್ಡಿಕರ್ ಅವರನ್ನು ಸ್ವಾಗತಿಸಿ ಬರಮಾಡಿಕೊಂಡು ಅವರು ಮಾತನಾಡಿದರು.

ಬೇರೆ ಪಕ್ಷಗಳ ಕಾರ್ಯಕರ್ತರನ್ನು ಹಂತ ಹಂತವಾಗಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

ADVERTISEMENT

ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುವ ಗುರಿ ಇಟ್ಟುಕೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರ ಹಾಗೂ ತಾವು ಅಧಿಕಾರದಲ್ಲಿ ಇದ್ದ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.

ಅಶೋಕ ಖೇಣಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದೇನೆ ಎಂದು ಜೋಸೆಫ್ ಕೊಡ್ಡಿಕರ್ ತಿಳಿಸಿದರು.

ಬೀದರ್ ದಕ್ಷಿಣದಲ್ಲಿ ಮೂರು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ ಸಂಗ್ರಾಮ, ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ಚಂದ್ರಶೇಖರ ಚನಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯ ಫೆರೋಜ್‍ಖಾನ್ ಇದ್ದರು.

ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜಕುಮಾರ ಪಾಟೀಲ, ಮಾಜಿ ಸದಸ್ಯರಾದ ಚಂದ್ರಶೇಖರ ಮಡಕಿ, ಗ್ರಾಮ ಪಂಚಾಯಿತಿ ಸದಸ್ಯ ರಾಜಶೇಖರ ಚಟ್ನಳ್ಳಿ, ಮುಖಂಡರಾದ ಸಂಜುಕುಮಾರ ಕೋಡಗೆ, ಅರುಣ ಸಾಮ್ರಾಟ್, ಇಮ್ಯಾನುವೆಲ್ ಮಂದಕನಳ್ಳಿ, ಸುಧಾಕರ ಕೋಟೆ, ಕಾಂಗ್ರೆಸ್ ಬೀದರ್ ದಕ್ಷಿಣ ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷ ಲೋಕೇಶ ಕನಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.