ADVERTISEMENT

25 ಬಡ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ: ಸಚಿವ ರಹೀಂಖಾನ್

​ಪ್ರಜಾವಾಣಿ ವಾರ್ತೆ
Published 16 ಜನವರಿ 2019, 13:30 IST
Last Updated 16 ಜನವರಿ 2019, 13:30 IST
ರಹೀಂ ಖಾನ್‌
ರಹೀಂ ಖಾನ್‌   

ಬೀದರ್: ‘ಬೀದರ್, ಕಲಬುರ್ಗಿ ಹಾಗೂ ಬೆಂಗಳೂರಿನಲ್ಲಿರುವ ತಮ್ಮ ಕಾಲೇಜುಗಳಲ್ಲಿ ಪ್ರತಿ ವರ್ಷ ಒಟ್ಟು 25 ಬಡ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಒದಗಿಸಲಾಗುವುದು’ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ರಹೀಂಖಾನ್ ಪ್ರಕಟಿಸಿದ್ದಾರೆ.

‘ಪಿಯುಸಿ, ಡಿ.ಇಡಿ., ಬಿ.ಇಡಿ, ಫಾರ್ಮಸಿ ಹಾಗೂ ನರ್ಸಿಂಗ್ ಕಾಲೇಜುಗಳಲ್ಲಿ ತಲಾ ಐವರಿಗೆ ಪ್ರವೇಶ ಕಲ್ಪಿಸಲಾಗುವುದು. ಬಡತನದ ಕಾರಣ ಶಿಕ್ಷಣ ಮುಂದುವರಿಸಲಾಗದೆ ಸಂಕಷ್ಟದಲ್ಲಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ನೆರವು ನೀಡಲಾಗುವುದು’ ಎಂದು ತಿಳಿಸಿದ್ದಾರೆ.

‘ಬೀದರ್ ವಿಧಾನಸಭಾ ಕ್ಷೇತ್ರದಲ್ಲಿ ಪ್ರಾರ್ಥನೆಗೆ ಕರೆ ನೀಡುವ (ಅಜಾನ್) ಹಾಗೂ ಪ್ರಾರ್ಥನೆ ನಡೆಸಿಕೊಡುವ (ಪೇಶಮಾಮ್) ತಲಾ ಐವರಿಗೆ ವೈಯಕ್ತಿಕವಾಗಿ ಉಮ್ರಾಗೆ ಕಳುಹಿಸಲಾಗುವುದು’ ಎಂದು ಹೇಳಿದ್ದಾರೆ.

ADVERTISEMENT

‘ಆಸಕ್ತರು ಬೀದರ ನಗರದ ಚಿದ್ರಿ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಲ್ಲಿ ಡ್ರಾ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.