ಕೇಶವರಾವ್ ನಿಟ್ಟೂರಕರ್
ಭಾಲ್ಕಿ (ಬೀದರ್ ಜಿಲ್ಲೆ): ಸ್ವಾತಂತ್ರ್ಯ ಹೋರಾಟಗಾರ, ಮಾಜಿ ವಿಧಾನ ಪರಿಷತ್ ಸದಸ್ಯ ಕೇಶವರಾವ್ ನಿಟ್ಟೂರಕರ್ (102) ಗುರುವಾರ ಬೀದರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೂಲತಃ ಭಾಲ್ಕಿ ತಾಲ್ಲೂಕಿನ ನಿಟ್ಟೂರ್ (ಬಿ) ಗ್ರಾಮದವರಾದ ಕೇಶವರಾವ್ ನಿಟ್ಟೂರಕರ್ ಐದು ದಶಕ ವಕೀಲಿ ವೃತ್ತಿ ಮಾಡಿದ್ದರು. 1958, 1960 ಹಾಗೂ 1966ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದರು. 1958 ರಿಂದ 1960ರ ವರೆಗೆ ವಿಧಾನ ಪರಿಷತ್ ಉಪ ಸಭಾಪತಿಯಾಗಿ ಕೆಲಸ ನಿರ್ವಹಿಸಿದ್ದರು.
ಮೃತರಿಗೆ ಮೂವರು ಪುತ್ರರು, ಇಬ್ಬರು ಪುತ್ರಿಯರಿದ್ದಾರೆ. ಗುರುವಾರ ಸಂಜೆ ಭಾಲ್ಕಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.