ADVERTISEMENT

ಬೀದರ್: ಅಕ್ಟೋಬರ್ 1ಕ್ಕೆ ‘ಫ್ರೀಡಂ ರನ್’

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2020, 15:32 IST
Last Updated 26 ಸೆಪ್ಟೆಂಬರ್ 2020, 15:32 IST

ಬೀದರ್: ಕೇಂದ್ರ ಸರ್ಕಾರದ ಫಿಟ್ ಇಂಡಿಯಾ ಅಭಿಯಾನದ ಅಡಿ ಫಿಟ್ ಇಂಡಿಯಾ ಫ್ರೀಡಂ ರನ್ ಕಾರ್ಯಕ್ರಮವು ನಗರದ ಬಿ.ವಿ.ಭೂಮರೆಡ್ಡಿ ಕಾಲೇಜಿನಲ್ಲಿ ಅಕ್ಟೋಬರ್ 1ರ ಬೆಳಿಗ್ಗೆ 7ಕ್ಕೆ ನಡೆಯಲಿದೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಿ.ವಿ. ಭೂಮರಡ್ಡಿ ಮಹಾವಿದ್ಯಾಲಯದ ಎನ್.ಸಿ.ಸಿ ಯುನಿಟ್‍ಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜನ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗದ ಪ್ರಯುಕ್ತ ಯುವಕರು ಹಾಗೂ ಯುವತಿಯರು ತಮ್ಮ ಮನೆಯಲ್ಲಿಯೇ ಯೋಗ, ವ್ಯಾಯಾಮ ಹಾಗೂ ಸ್ವಸ್ಥ ಆರೋಗ್ಯಕ್ಕಾಗಿ ಓಟ ಕೈಗೊಂಡು ವಾಟ್ಸ್‍ಆ್ಯಪ್ ಮೂಲಕ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 8197058425, 9591609691 ಅಥವಾ 9448584979ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.